Breaking News

ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ: ಸಂಘಟನೆಗಳಿಂದ ವಿಜಯೋತ್ಸವ

Spread the love

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕನ್ನಡ ಪರ ಮಹತ್ವದ ಗೊತ್ತುವಳಿ ಅಂಗೀಕಾರವಾದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು.

ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಹಾಗೂ ಚನ್ನಮ್ಮ ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ಸರ್ಕಾರದ ಪರ ಘೋಷಣೆಗಳನ್ನು ಕೂಗಿ ಪಾಲಿಕೆಯ ನಿರ್ಧಾರವನ್ನು ಸ್ವಾಗತಿಸಿದರು.

1988ರಲ್ಲಿ ವಿಧಾನಸಭೆಯಲ್ಲಿ ಅಂಗೀಕರಿಸಲಾದ ಮಹಾಜನ್ ವರದಿಯ ನಿರ್ಣಯದಂತೆ ಮುಂದುವರಿಯುವ ಕುರಿತು ಪಾಲಿಕೆ ಸಭೆಯಲ್ಲಿ ಗೊತ್ತುವಳಿ ಅಂಗೀಕರಿಸಲಾಗಿದೆ ಎಂದು ಹೋರಾಟಗಾರರು ತಿಳಿಸಿದರು.

ಕಳೆದ ಆರು ತಿಂಗಳಿಂದ ಕನ್ನಡಪರ ನಿರ್ಣಯಕ್ಕಾಗಿ ನಿರಂತರ ಹೋರಾಟ ನಡೆಸಲಾಗಿತ್ತು. ಸರ್ಕಾರದ ಮಧ್ಯಪ್ರವೇಶ ಹಾಗೂ ಪಾಲಿಕೆ ಸೂಪರ್‌ಸೀಡ್ ಆಗುವ ಆತಂಕದ ನಡುವೆಯೇ ಇಂದು ನಿರ್ಣಯ ಕೈಗೊಂಡಿರುವುದು ಸಂತಸ ತಂದಿದೆ ಎಂದು ಕನ್ನಡಪರ ಹೋರಾಟಗಾರರು ಹೇಳಿದರು.

ಹೋರಾಟಗಾರ ಅಶೋಕ ಚಂದರಗಿ ನೇತೃತ್ವದಲ್ಲಿ ನಡೆದ ವಿಜಯೋತ್ಸವದಲ್ಲಿ ಕರವೇ ಶಿವರಾಮೇಗೌಡ ಬಣ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.


Spread the love

About Laxminews 24x7

Check Also

ಬರ ಪರಿಹಾರ ನೀಡಿಲ್ಲ, ಬೇಡಿಕೆ ಈಡೇರಿಸಿಲ್ಲ; ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಆರ್. ಅಶೋಕ್

Spread the loveಬೆಂಗಳೂರು: ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗಾಗಿ ಪ್ರತಿಪಕ್ಷ ಬಿಜೆಪಿ  ಇಟ್ಟಿರುವ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿಲ್ಲ. ಬದಲಾಗಿ ರೈತರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ