Breaking News

ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!

Spread the love

ಚಿಕ್ಕಬಳ್ಳಾಪುರ: ಪ್ರತಿಷ್ಟಿತ ವಿಶ್ವವಿದ್ಯಾಲಯ ವಿದ್ಯಾರ್ಥಿನಿಯೊಬ್ಬಳು 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ಸರ್ಜಾಪುರ ಮೂಲದ ನಯನಾ (20) ಮೃತಪಟ್ಟಿರುವ ದುರ್ದೈವಿ. ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.

ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ  ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್‌ ಪದವಿ ವ್ಯಾಸಂಗ ಮಾಡುತ್ತಿದ್ದಳು.

14ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಅಕ್ರಮ ಸಂಬಂಧ : ಮಹಿಳೆಯನ್ನು ಕೊಂದು ಅರ್ಧ ದೇಹವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ…

Spread the loveಹೈದರಾಬಾದ್‌: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ನೌಕಾಪಡೆಯ ಉದ್ಯೋಗಿ, ಆಕೆಯನ್ನು ಕೊಂದು, ಮೃತದೇಹವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ ಆಘಾತಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ