Breaking News

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ವಿರೋಧಿಸಿ ಪ್ರತಿಭಟನೆ

Spread the love

ಬೆಳಗಾವಿ: ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಶ್ರೀರಾಮಸೇನೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟಿಸಿದರು. ಬಳಿಕ ಕಾಲೇಜುಗಳಲ್ಲಿ ಕೇಸರಿ ಶಾಲು ವಿತರಿಸಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಾತಿ ವಿಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್ ಸರ್ಕಾರ ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದೆ. ಮತಬ್ಯಾಂಕ್ ಗಟ್ಟಿಗೊಳಿಸುವ ಉದ್ದೇಶದಿಂದ ಹಿಜಾಬ್ ಧರಿಸಲು ಮರು ಆದೇಶ ಹೊರಡಿಸಿದೆ. ಇದು ಕಲಿಕೆ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.
ಹೀಗಾಗಿ ಕೂಡಲೇ ಆದೇಶ ಮರಳಿ ಪಡೆಯಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದಂತೆ ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿಕೊಳ್ಳಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಶಾಲಾ ಕಾಲೇಜುಗಳ ಎದುರು ನಿರಂತರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿಕುಮಾರ ಕೋಕಿತ್ಕರ, ವಿನಯ ಅಂಗರೋಳಿ, ಬಾಳು ಪವಾರ, ಸಂತೋಷ ಜಾಧವ, ಕುಶಾಲ ಅಂಬೋಳಕರ, ವಿನಯ ಹಂಗರೇಕರ, ಓಂಕಾರ ಗೋಡ್ಸೆ ಇತರರಿದ್ದರು.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ