Breaking News

ಬೇಡಿಕೆ ಈಡೇರದಿದ್ದರೆ ಚುನಾವಣೆ ಬಹಿಷ್ಕಾರ: ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ವಿಕಲಚೇತನರ ಒಕ್ಕೂಟದಿಂದ ಎಚ್ಚರಿಕೆ

Spread the love

ತಮ್ಮ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ “ಬೆಳಗಾವಿ ಜಿಲ್ಲಾ ವಿಕಲಚೇತನರ ಒಕ್ಕೂಟ” ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿತು. ಸರ್ಕಾರದ ನಿರ್ಲಕ್ಷ್ಯ ಧೋರಣೆ ಮುಂದುವರೆದರೆ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ದಿವ್ಯಾಂಗರು ಈ ಸಂದರ್ಭದಲ್ಲಿ ಗುಡುಗಿದ್ದಾರೆ.

ಬೆಳಗಾವಿ ಜಿಲ್ಲಾ ವಿಕಲಚೇತನರ ಒಕ್ಕೂಟದ ನೇತೃತ್ವದಲ್ಲಿ ನೂರಾರು ವಿಕಲಚೇತನರು ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರು. ವಿಕಲಚೇತನರ ಮಾಸಿಕ ಪೋಷಣಾ ಭತ್ಯೆಯನ್ನು ಕನಿಷ್ಠ 6,000 ರೂಪಾಯಿಗಳಿಗೆ ಹೆಚ್ಚಿಸಬೇಕು ಹಾಗೂ ರಾಜ್ಯದ ಎಲ್ಲಾ ದಿವ್ಯಾಂಗರಿಗೆ ಬಿಪಿಎಲ್ ಪಡಿತರ ಚೀಟಿ ವಿತರಿಸಬೇಕು ಎಂಬುದು ಇವರ ಪ್ರಮುಖ ಬೇಡಿಕೆಗಳಾಗಿವೆ. ಇದರೊಂದಿಗೆ ವರ್ಷಕ್ಕೆ 2 ಲಕ್ಷ ರೂಪಾಯಿಗಳ ಆರೋಗ್ಯ ವಿಮೆ ಮತ್ತು ‘ಶಕ್ತಿ’ ಯೋಜನೆಯಡಿ ಉಚಿತ ಬಸ್ ಪಾಸ್ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು.
ಸ್ಥಳೀಯ ಸಂಸ್ಥೆಗಳಿಂದ ಹಿಡಿದು ವಿಧಾನಸಭೆ ಮತ್ತು ಲೋಕಸಭೆಯವರೆಗೆ ವಿಕಲಚೇತನರಿಗೆ ರಾಜಕೀಯವಾಗಿ ಒಂದು ಸ್ಥಾನವನ್ನು ಮೀಸಲಿಡಬೇಕು ಎಂದು ಒಕ್ಕೂಟವು ಆಗ್ರಹಿಸಿದೆ. ಪ್ರಸ್ತುತ ವಿಕಲಚೇತನರಿಗಾಗಿ ಮೀಸಲಿಟ್ಟಿರುವ ಶೇಕಡಾ 5ರಷ್ಟು ಅನುದಾನ ದುರ್ಬಳಕೆಯಾಗುತ್ತಿದ್ದು, ಇದನ್ನು ತಡೆದು ಪ್ರತಿ ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ‘ದಿವ್ಯಾಂಗ ಭವನ’ಗಳನ್ನು ನಿರ್ಮಿಸಬೇಕು ಎಂದು ಮನವಿಯಲ್ಲಿ ಒತ್ತಿ ಹೇಳಲಾಗಿದೆ.
ಮನವಿ ಸಲ್ಲಿಸಿದ ನಂತರ ಮಾತನಾಡಿದ ಸಂಘಟನೆಯ ಮುಖಂಡರು, ಆರ್ಥಿಕವಾಗಿ ಹಿಂದುಳಿದಿರುವ ವಿಕಲಚೇತನರ ಬದುಕಿಗೆ ಸರ್ಕಾರ ಆಸರೆಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರವು ಇದೇ ರೀತಿ ನಿರ್ಲಕ್ಷ್ಯ ಧೋರಣೆ ಮುಂದುವರೆಸಿದರೆ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಮತದಾನದ ಹಕ್ಕನ್ನು ಬಹಿಷ್ಕರಿಸುವ ಮೂಲಕ ಕಠಿಣ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ರಾವಸಾಹೇಬ್ ದೇವರಮನಿ, ಚಿದಾನಂದ ದುರದುಂಡಿ, ಶಾಂತಾಬಾಯಿ ಮಳವಾಡೆ, ಸುವರ್ಣ ಮಳವಾಡೆ, ಬಸವರಾಜ್ ಬಾಳನಾಯಕ, ಗಣೇಸ್ ಸಡೇಕರ, ಲಕ್ಷ್ಮಣ್ ರಾವಣಕಟ್ಟಿ, ರಾಜೇಶ್ವರಿ ರಾಜಣ್ಣವರ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.


Spread the love

About Laxminews 24x7

Check Also

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Spread the loveಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ