Breaking News

ನಿಪ್ಪಾಣಿ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ

Spread the love

ನಿಪ್ಪಾಣಿ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಮಹಿಳಾ ಮೀಸಲಾತಿ ಮಸೂದೆ ನಾರಿ ಶಕ್ತಿ ವಂದನಾ ಅಧಿನಿಯಮ ಜಾರಿಯಾಗದಂತೆ ತಡೆದ ಮಹಿಳಾ ವಿರೋಧಿ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟದ ವಿರುದ್ಧ ಇಂದು ಕ್ಷೇತ್ರದ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ದೇಶದ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯತೆ ಕಲ್ಪಿಸುವ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಜಾರಿಯಾಗದಂತೆ ತಡೆದ ಕಾಂಗ್ರೆಸ್‌ ಹಾಗೂ ಮಿತ್ರ ಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ದೇಶದ ಮಹಿಳೆಯರಿಗೆ ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಲ್ಲಿ ಶೇ.33 ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸುವ ಹಿನ್ನೆಲೆಯಲ್ಲಿ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರ್ಕಾರವು ʼನಾರಿ ಶಕ್ತಿ ವಂದನಾ ಅಧಿನಿಯಮʼವನ್ನು ತಂದಿತ್ತು. ಆದರೆ, ದೇಶದ ಮಹಿಳೆಯರಿಗೆ ಮೀಸಲಾತಿ ಸೌಲಭ್ಯ ನೀಡಬಾರದು, ಶಾಸನಸಭೆಗಳಲ್ಲಿ ಅವರ ಪ್ರಾತಿನಿಧ್ಯತೆಗೆ ಅನುಮತಿ ನೀಡಬಾರದು ಹಾಗೂ ಅವರ ಸಬಲೀಕರಣವಾಗಬಾರದು ಎನ್ನುವ ಮನಸ್ಥಿತಿಯಿಂದ ಕಾಂಗ್ರೆಸ್‌ ಪಕ್ಷ ಮಹಿಳೆಯರಿಗೆ ದ್ರೋಹವೆಸಗಿದೆ. ಕಾಂಗ್ರೆಸ್‌ ಹಾಗೂ ಮೈತ್ರಿ ಪಕ್ಷಗಳ ಈ ನಿರ್ಧಾರದಿಂದ ದೇಶದ ಸಮಸ್ತ ಮಹಿಳೆಯರು ಜಾಗೃತಗೊಳ್ಳಬೇಕಿದೆ.

ಈ ಮಹಿಳಾ ಮೋರ್ಚಾ ಸದಸ್ಯರು,ಕಾರ್ಯಕರ್ತರು ಮತ್ತು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ