Breaking News

ಸಿದ್ದರಾಮಯ್ಯ ರಾಜೀನಾಮೆ ವಿರೋಧಿಸಿ ಯಾದಗಿರಿಯಲ್ಲಿ ಪ್ರತಿಭಟನೆ – ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

Spread the love

ಯಾದಗಿರಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದನ್ನು ವಿರೋಧಿಸಿ ಯಾದಗಿರಿಯಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಭಿಮಾನಿಯೋರ್ವ ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಯಾದಗಿರಿಯ ಸುಭಾಷ್ ವೃತ್ತದಲ್ಲಿ ನೂರಾರು ಅಭಿಮಾನಿಗಳು ಸಿದ್ದರಾಮಯ್ಯ ಅವರ ಪರವಾಗಿ ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭೀಮು ಪೂಜಾರಿ ಎಂಬ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ನನ್ನ ಸಾವಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಕಾರಣರಾಗುತ್ತಾರೆಂದು ಹೇಳಿ, ಸಾರ್ವಜನಿಕರ ಎದುರೇ ಕ್ರಿಮಿನಾಶಕದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. 

ಕೂಡಲೇ ಸ್ಥಳದಲ್ಲಿಯೇ ಇದ್ದ ಇತರೆ ಪ್ರತಿಭಟನಾಕಾರರು ಹಾಗೂ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ತಡೆದು, ಬಾಟಲಿಯನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಯತೀಂದ್ರ ಸಂಪುಟ ಸೇರ್ಪಡೆಗೆ ಕೊನೆಗೂ ಒಪ್ಪಿದ ಸಿದ್ದರಾಮಯ್ಯ

Spread the loveಬೆಂಗಳೂರು: ಪುತ್ರ ಡಾ. ಯತೀಂದ್ರ ಅವರ ಸಂಪುಟ ಸೇರ್ಪಡೆಗೆ ಕೊನೆಗೂ ಸಿದ್ದರಾಮಯ್ಯ ಅವರು ಒಪ್ಪಿದ್ದಾರೆ ಎಂದು ಆಪ್ತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ