Breaking News

ಗುಳೆ ಹೋಗುವುದನ್ನು ತಪ್ಪಿಸಲು ಜನರಿಗೆ ಉದ್ಯೋಗ ನೀಡಿ: ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಪರಮೇಶ್ವರ್ ಸೂಚನೆ

Spread the love

ಬೆಂಗಳೂರು: ಬರಗಾಲದ ಹಿನ್ನೆಲೆಯಲ್ಲಿ ಜನರು ಉದ್ಯೋಗಕ್ಕಾಗಿ ಗುಳೆ ಹೋಗುತ್ತಿದ್ದಾರೆ. ಎಲ್ಲ ಜಿಲ್ಲಾ ಪಂಚಾಯತ್ ಸಿಇಒಗಳು ವಿಬಿ -ಜಿ ರಾಮ್ ಜಿ ಯೋಜನೆಯಡಿ  ಕೂಡಲೇ ಜನರಿಗೆ ಉದ್ಯೋಗ ನೀಡಿ, ಗುಳೆ ಹೋಗುವುದನ್ನು ತಪ್ಪಿಸಲು ಕ್ರಮ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್  ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ‌‌.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ‘ಬರ ಪರಿಸ್ಥಿತಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೃಷಿ, ಚಟುವಟಿಕೆ ಹಾಗೂ ಉದ್ಯೋಗ ವಿಷಯಗಳ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ‌ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದು, ಸೂಕ್ತ ನಿರ್ದೇಶನಗಳನ್ನು ನೀಡಿದರು.

ವಿಜಯಪುರ ತಾಲೂಕಿನಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯ ಅಡಿ 20 ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ಜನರಿಗೆ ಕೆಲಸ ನೀಡಲಾಗುತ್ತಿದೆ. ಬರಗಾಲದ ಹಿನ್ನೆಲೆಯಲ್ಲಿ ಜನ ಗುಳೆ ಹೋಗುತ್ತಿದ್ದಾರೆ ಎಂದು ವರದಿಯಾಗುತ್ತಿದೆ. ಕೂಡಲೇ ಕೆಲಸ ಆರಂಭಿಸಬೇಕು. ಜನರಿಗೆ ಊರುಗಳಲ್ಲಿ ಕೆಲಸ ನೀಡಿ, ಗುಳೆ ಹೋಗುವುದನ್ನು ತಪ್ಪಿಸಬೇಕು ಎಂದು ಸೂಚನೆ ನೀಡಿದರು.

ವಿಬಿ ಜಿ ರಾಮ್ ಜಿ ಯೋಜನೆಯಡಿ ರಾಜ್ಯದ್ಯಾಂತ ತಿಂಗಳಿಗೆ 1.10 ಕೋಟಿ ಮಾನವ ದಿನಗಳನ್ನು ಸೃಜಿಸಿ, ಪೂರ್ಣಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಈವರೆಗೂ ಕೆಲಸ ಆರಂಭಿಸಿಲ್ಲವಾದರೆ, ಗುರಿ ಪೂರ್ಣಗೊಳಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬರ ಇರುವುದರಿಂದ ಜನರಿಗೆ ಉದ್ಯೋಗದ ಅವಶ್ಯಕತೆ ಬಹಳ ಇದೆ. ಎಲ್ಲ ಜಿಲ್ಲಾ ಪಂಚಾಯತ್ ಸಿಇಒಗಳು ವಿಬಿ -ಜಿ ರಾಮ್ ಜಿ ಯೋಜನೆಯಡಿ ಕೂಡಲೇ ಜನರಿಗೆ ಕೆಲಸ ನೀಡಬೇಕು. ಈ ಬಗ್ಗೆ ತ್ವರಿತಗತಿಯಲ್ಲಿ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಬಳ್ಳಾರಿ, ಬಾಗಲಕೋಟೆ, ಹಾವೇರಿ, ಚಾಮರಾಜನಗರ, ವಿಜಯಪುರ ಸೇರಿದಂತೆ ಮುಂತಾದ ಜಿಲ್ಲೆಗಳು ವಿಬಿ-ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಕೆಲಸ ನೀಡುವಲ್ಲಿ ತೀರ ಹಿಂದೆ ಬಿದ್ದಿವೆ. ಬಹುತೇಕ ಆರಂಭಿಸಿಲ್ಲ. ಚಾಮರಾಜನಗರ ಜಿಲ್ಲೆಯ ಅಂಕಿ-ಅಂಶ ಗಮನಿಸಿದರೆ ಆಶ್ಚರ್ಯವಾಗುತ್ತದೆ. ಜನ ತಮಿಳುನಾಡು, ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ವಿಬಿ-ಜಿ ರಾಮ್ ಜಿ ಯೋಜನೆಯಡಿ ಏನೆಲ್ಲ ಕೆಲಸಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.

ಬಹುತೇಕ ಜಿಲ್ಲೆಗಳಲ್ಲಿ 25 ವಾರ, 38 ವಾರ, 54 ವಾರಗಳಿಗೆ ಆಗುವಷ್ಟು ಮೇವು ಸಂಗ್ರಹವಿದೆ ಎಂದೆಲ್ಲ ಮಾಹಿತಿ ನೀಡಲಾಗುತ್ತಿದೆ. ರೈತರ ಬಳಿ ಸಂಗ್ರಹವಿರುವ ಮೇವಿನ ಬಣವೆಗಳನ್ನು ಆಧರಿಸಿ ಸರ್ಕಾರಕ್ಕೆ ಮಾಹಿತಿ ನೀಡುವುದು ಸರಿಯಲ್ಲ. ರೈತರು ಸಂಗ್ರಹಿಸಿರುವುದು ನಮಗೆ ಲಭ್ಯವಾಗುವುದಿಲ್ಲ. ನಿಮ್ಮಲ್ಲಿ ಲಭ್ಯತೆ ಇರುವುದನ್ನು ಮಾತ್ರ ತಿಳಿಸಬೇಕು. ಜಾನವಾರುಗಳಿಗೆ ತಕ್ಷಣಕ್ಕೆ ಮೇವು ಬೇಕು ಎಂದಾಗ ಒದಗಿಸುತ್ತೀರಿ ಎಂಬುದು ಮುಖ್ಯವಾಗುತ್ತದೆ ಎಂದರು.


Spread the love

About Laxminews 24x7

Check Also

ದಿಲ್ಲಿಯಲ್ಲಿ ಬಿಡಾರ ಹೂಡಿರುವ ಶಾಸಕರನ್ನ ಹೈಕಮಾಂಡ್ ಮರಳಿ ರಾಜ್ಯಕ್ಕೆ ಕಳಿಸಬೇಕು: ಯತ್ನಾಳ್

Spread the loveವಿಜಯಪುರ: ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಿಡಾರ ಹೂಡಿರುವವರನ್ನ ಕಾಂಗ್ರೆಸ್‌ ಹೈಕಮಾಂಡ್‌ ಮರಳಿ ರಾಜ್ಯಕ್ಕೆ ಕಳುಹಿಸಬೇಕು ಎಂದು ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ