Breaking News

ಕೇಸ್‌ ಇತ್ಯರ್ಥಕ್ಕೆ ಲಂಚಕ್ಕೆ ಕೈಯೊಡ್ಡಿದ ಪಿಎಸ್‌ಐ ʻಲೋಕಾʼ ಬಲೆಗೆ

Spread the love

ಹಾಸನ: ಎನ್‌ಸಿಆರ್‌ ಪ್ರಕರಣ ಇತ್ಯರ್ಥಪಡಿಸಲು ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ 20,000 ರೂ. ಹಣ ಪಡೆಯುತ್ತಿದ್ದ ಹಳೆಬೀಡು  ಪಿಎಸ್‌ಐನ್ನು ಲೋಕಾಯುಕ್ತ  ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್ ಸಿಕ್ಕಿಬಿದ್ದ ಪೊಲೀಸ್‌ ಅಧಿಕಾರಿ. ಎನ್‌ಸಿಆರ್ ಇತ್ಯರ್ಥ ಪಡಿಸಲು ನವೀನ ಎಂಬವರಿಂದ ಪಿಎಸ್‌ಐ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಹೋಟೆಲ್‌ನಲ್ಲಿ ಮುಂಗಡವಾಗಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಹಣದ ಸಮೇತ ಅವರನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಶಿಲ್ಪಾ, ಗವಿರಾಜು ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ