Breaking News

ಜನತೆಗೆ ಬೆಲೆ ಏರಿಕೆಯ ಬಿಸಿ: ನಂದಿನಿ ಹಾಲಿನ ದರ ಲೀಟರ್‌ಗೆ 4 ರಿಂದ 5 ರೂ. ಹೆಚ್ಚಳ?

Spread the love

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದ್ದು, ನಂದಿನಿ ಹಾಲಿನ ದರ ಏರಿಕೆ ಬಹುತೇಕ ನಿಶ್ಚಿತವಾಗಿದೆ. ಪ್ರತಿ ಲೀಟರ್ ಹಾಲಿನ ಬೆಲೆ 4 ರಿಂದ 5 ರಷ್ಟು ಹೆಚ್ಚಳವಾಗುವ ನಿರೀಕ್ಷೆಯಿದೆ.

ಬೆಂಗಳೂರಿನ ಕರ್ನಾಟಕ ಹಾಲು ಮಹಾಮಂಡಳ  ಕಚೇರಿಯಲ್ಲಿ ಇಂದು ಮಹತ್ವದ ಸರ್ವಸದಸ್ಯರ ಸಭೆ ಜರುಗಿತು. ಸಭೆಯಲ್ಲಿ ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳ ಪ್ರಮುಖರು ಭಾಗವಹಿಸಿದ್ದು, ಹೈನುಗಾರರ ಹಿತದೃಷ್ಟಿಯಿಂದ ಪ್ರತಿ ಲೀಟರ್ ಹಾಲಿಗೆ ಕನಿಷ್ಠ 10 ರೂ. ಹೆಚ್ಚಳ ಮಾಡುವಂತೆ ಒಕ್ಕೂಟಗಳು ಪ್ರಬಲ ಬೇಡಿಕೆ ಮಂಡಿಸಿವೆ.

ಒಕ್ಕೂಟಗಳ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೆಎಂಎಫ್ ಲೀಟರ್‌ಗೆ 4 ರೂ ನಿಂದ 5 ರೂ. ಹೆಚ್ಚಿಸಲು ಚಿಂತನೆ ನಡೆಸಿದ್ದು, ಈ ತಿಂಗಳಾಂತ್ಯಕ್ಕೆ ನೂತನ ದರ ಜಾರಿಗೆ ಬರುವ ಸಾಧ್ಯತೆಯಿದೆ.

ಒಕ್ಕೂಟಗಳ ಮನವಿಯನ್ನು ಸರ್ಕಾರದ ಗಮನಕ್ಕೆ ತಂದು, ಮುಖ್ಯಮಂತ್ರಿಗಳ ಅನುಮೋದನೆ ಪಡೆದ ನಂತರವೇ ಅಂತಿಮ ನಿರ್ಧಾರ ಪ್ರಕಟವಾಗಲಿದೆ. ಒಟ್ಟಿನಲ್ಲಿ ತಿಂಗಳಾಂತ್ಯಕ್ಕೆ ಗ್ರಾಹಕರ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಿದೆ.

ಸಂಭಾವ್ಯ ಪರಿಷ್ಕೃತ ದರಗಳ ಪಟ್ಟಿ
* ಟೋನ್ಡ್ ಹಾಲು (Toned Milk): 46 ರಿಂದ 50
* ಶುಭಂ ಹಾಲು (Shubham Milk): 52 ರಿಂದ 56
* ಸಮೃದ್ಧಿ ಹಾಲು (Samruddhi Milk): 55 ರಿಂದ 59
* ಸ್ಪೆಷಲ್ ಹಾಲು (Special Milk): 52 ರಿಂದ 56
* ಡಬಲ್ ಟೋನ್ಡ್ ಹಾಲು (Double Toned Milk): 43 ರಿಂದ 47
* ಆರೆಂಜ್ ಹಾಲು (Orange Milk): 50 ರಿಂದ 54
* ಗ್ರೀನ್ ಸ್ಪೆಷಲ್ (Green Special Milk): 50 ರಿಂದ 54


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ