Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / “ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ”

“ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ”

Spread the love

ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ”

ನಿಪ್ಪಾಣಿ ಮತಕ್ಷೇತ್ರದ ಆಡಿ ಗ್ರಾಮಕ್ಕೆ ಭೇಟಿ ನೀಡಿ, ಕೊರೋನಾ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು, ಸಾಮಾಜಿಕ‌ ಅಂತರ ಕಾಯ್ದುಕೊಂಡು ವಿವಿಧ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೊರೋನಾ ತಡೆಗಟ್ಟಲು ಕೈಗೊಳ್ಳುತ್ತಿರುವ ಕ್ರಮಗಳ‌ ಕುರಿತು ಚರ್ಚಿಸಿ, ಸಭೆ ಉದ್ದೇಶಿಸಿ ಮಾತನಾಡಿದರು.

ಆಡಿ ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಿ, ಸಾರ್ವಜನಿಕರು ಮನೆಯಿಂದ ಹೊರಗೆ ಬರದಂತೆ ನೋಡಿಕೊಳ್ಳಬೇಕು‌. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕ್ವಾರಂಟೈನ್ ನಲ್ಲಿರುವವರ ಬಗ್ಗೆ ಗಮನ ನೀಡಿ, ಕೊರೋನಾ ಹರಡದಂತೆ ಕಟ್ಟುನಿಟ್ಟಾಗಿ ಗಮನಹರಿಸಬೇಕು‌. ಏನೇ ಸಮಸ್ಯೆ ಇದ್ದರು ಮೇಲಾಧಿಕಾರಿಗಳ ಗಮನಕ್ಕೆ ತರಬೇಕು, ಗ್ರಾಮದಲ್ಲಿ ಪಡಿತರ ವಿತರಣೆಯಲ್ಲಿ ಏನಾದರು ತೊಂದರೆ ಇದ್ದರೇ ನನ್ನ ಗಮನಕ್ಕೆ ತರಬೇಕು ಜೊತೆಗೆ ಜನ್ ಧನ್ ಖಾತೆಗಳಿಗೆ ಹಣ ಜಮಾ ಆಗಿದೇ, ಇಲ್ಲವೊ ಎಂಬ ಮಾಹಿತಿ ಪಡೆದು, ಏನಾದರು ಸಮಸ್ಯೆಗಳಿದ್ದರೇ ಅಧಿಕಾರಿಗಳು ಸರಿಪಡಿಸುವಂತೆ ಸೂಚಿಸಿದರು.


Spread the love

About Laxminews 24x7

Check Also

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Spread the love ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೇಲೆ ಭಾರತಕ್ಕೆ ಕಪ್ಪುಚುಕ್ಕೆಯಾಗಿರುವ ಪಾಕ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ