ಬೆಂಗಳೂರು: ಕಳೆದ ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಲಾಕ್ಡೌನ್ ಹಿನ್ನೆಲೆ ಸುವಿದ್ಯಾ ವೆಬ್ಸೈಟ್ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಸುವಿದ್ಯಾ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಹಾಗೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ನಂಬರ್ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.
ಶಾಲೆಗಳಲ್ಲಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಗುಂಪು ಸೇರುವ ಸಾಧ್ಯತೆ ಇರುವುದರಿಂದ ಕೊರೊನಾ ಸೋಂಕು ಹರಡುವ ಭೀತಿಯಿಂದ ಸುವಿದ್ಯಾ ವೆಬ್ ಪೋರ್ಟಲ್ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು.
Laxmi News 24×7