Breaking News

ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.ಸುವಿದ್ಯಾ ವೆಬ್​ಸೈಟ್​ನಲ್ಲಿ ಲಭ್ಯ

Spread the love

ಬೆಂಗಳೂರು: ಕಳೆದ ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಲಾಕ್​ಡೌನ್​ ಹಿನ್ನೆಲೆ ಸುವಿದ್ಯಾ ವೆಬ್​ಸೈಟ್​ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಸುವಿದ್ಯಾ ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಹಾಗೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್​ ನಂಬರ್​ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.

ಶಾಲೆಗಳಲ್ಲಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಗುಂಪು ಸೇರುವ ಸಾಧ್ಯತೆ ಇರುವುದರಿಂದ ಕೊರೊನಾ ಸೋಂಕು ಹರಡುವ ಭೀತಿಯಿಂದ ಸುವಿದ್ಯಾ ವೆಬ್​ ಪೋರ್ಟಲ್​ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್​ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು.

http://result.bspucpa.com


Spread the love

About Laxminews 24x7

Check Also

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಸಿಗುತ್ತೆ?

Spread the loveಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ