Breaking News

ವಿವಿಧ ಅಭಿವೃದ್ದಿ ನಿಗಮ ನೇಮಕಾತಿಗೆ ಅರ್ಜಿ ಆಹ್ವಾನ – ಕೆಇಎ

Spread the love

ಬೆಂಗಳೂರು: ಕೃಷಿ ಮಾರಾಟ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಮತ್ತು ‌ ಬೆಂಗಳೂರು ಜಲಮಂಡಲಿಯಲ್ಲಿ ಖಾಲಿ ಇರುವ ವಿವಿಧ ರೀತಿಯ ಒಟ್ಟು 37 ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 4 ಕೊನೇ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ  ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ನಿಗದಿ ನಂತರ ಪರೀಕ್ಷೆ ನಡೆಸದೇ ಇರುವ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿದು, ಮರು ಅಧಿಸೂಚನೆ ಹೊರಡಿಸಲು ಸರ್ಕಾರ ಸೂಚಿಸಿತ್ತು. ಆ ಪ್ರಕಾರ ಸಂಬಂಧಪಟ್ಟ ಇಲಾಖೆಗಳಿಂದ‌ ಒಳ ಮೀಸಲಾತಿ ಅಳವಡಿಸಿಕೊಂಡು ಮರು ಅಧಿಸೂಚನೆ ಹೊರಡಿಸಿದ ನಂತರ ಅರ್ಜಿ ಕರೆದಿದ್ದು, ಈ ಹಿಂದೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯ ಎ, ಬಿ ಮತ್ತು ಸಿ ವರ್ಗ ಗಳ ಆರ್‌ಡಿ ಸಂಖ್ಯೆ ದಾಖಲು ಮಾಡದವರು ಕೂಡ ಈ ಹಿಂದಿನ ಅರ್ಜಿಯಲ್ಲೇ ಎಡಿಟ್ ಮಾಡಿ, ದಾಖಲಿಸಬಹುದು ಎಂದು ಅವರು ವಿವರಿಸಿದ್ದಾರೆ.

ಹೊಸದಾಗಿ ಅರ್ಜಿ ಸಲ್ಲಿಸುವವರು ಕೂಡ ಅರ್ಜಿ ಸಲ್ಲಿಸಬಹುದು. ಆದರೆ ಈ ಹುದ್ದೆಗಳಿಗೆ ಈ ಮೊದಲು ಅರ್ಜಿ ಸಲ್ಲಿಸಿದ್ದು, ಪುನಃ ಸಲ್ಲಿಸುವ ಅಗತ್ಯ ಇರುವುದಿಲ್ಲ ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಪ್ಯಾಕ್‌ ಮಾಡದ ಖಾದ್ಯ ತೈಲ ಮಾರಾಟಕ್ಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು

Spread the loveಮುಂಬೈ: ಮಹಾರಾಷ್ಟ್ರದಲ್ಲಿ ಸಡಿಲ (ಪ್ಯಾಕ್ ಮಾಡದ) ಖಾದ್ಯ ತೈಲ ಮಾರಾಟ ಮಾಡುವುದನ್ನು ರಾಜ್ಯ ಆಹಾರ ಮತ್ತು ಔಷಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ