Breaking News

ಮೌಲ್ವಿಗಳಿಗೆ ಅವಮಾನ ಆರೋಪ – ಪುನೀತ್ ಕೆರೆಹಳ್ಳಿ ಬಂಧನ

Spread the love

ಹಾಸನ: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪದ ಮೇಲೆ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯವರನ್ನು  ಕುಮಾರಸ್ವಾಮಿ ಲೇಔಟ್ ಪೊಲೀಸರು  ಬಂಧಿಸಿದ್ದಾರೆ.

ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಅಬ್ದುಲ್ ರಜಾಕ್ ಎಂಬವರು ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ, ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ಅವರ ನಿವಾಸದ ಮೇಲೆ ಪೊಲೀಸರು ದಾಳಿ ಮಾಡಿ, ಬಂಧಿಸಿ ಕರೆದೊಯ್ದಿದ್ದಾರೆ. ಬಂಧನದ ವೇಳೆ ಸರ್ಕಾರದ ವಿರುದ್ಧ ಅವರು ಕಿಡಿಕಾರಿದ್ದಾರೆ.

ನನಗೆ ಜೀವ ಬೆದರಿಕೆ ಇದೆ, ಅಬ್ದುಲ್ ರಜಾಕ್ ವಿರುದ್ಧ ನಾನು ದೂರು ಕೊಟ್ಟಿದ್ದೇನೆ. ಅವನನ್ನು ಬಂಧಿಸದೇ ನನ್ನನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಆಕ್ರೋ

ಪುನೀತ್ ಕೆರೆಹಳ್ಳಿ ಬಂಧಿಸುತ್ತಿದ್ದಂತೆ ಅವರ ತಾಯಿ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ