Breaking News

ಪುಣೆಯ 6,000 ಕೋಟಿ ಮೌಲ್ಯದ ಡ್ರಗ್ಸ್ ಮಾಫಿಯಾ ಕೇಸ್ – ಪ್ರಕರಣದ ಕಿಂಗ್‌ಪಿನ್ ವಿರೇಂದ್ರ ಬೈಸೋಯಾ ಅರೆಸ್ಟ್

Spread the love

ಮುಂಬೈ: 6,000 ಕೋಟಿ ರೂ. ಮೌಲ್ಯದ ಬೃಹತ್ ಡ್ರಗ್ಸ್ ದಂಧೆಯ ಪ್ರಮುಖ ರೂವಾರಿಯನ್ನು ಹೆಡೆಮುರಿಕಟ್ಟುವಲ್ಲಿ ಮಾದಕ ವಸ್ತು ನಿಗ್ರಹ ದಳ  ಯಶಸ್ವಿಯಾಗಿದೆ. ದುಬೈನಲ್ಲಿ  ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ ಕಿಂಗ್‌ಪಿನ್‌ನನ್ನು ಭಾರತಕ್ಕೆ ಕರೆತಂದಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬೋರ್ಡ್ (ಎನ್‌ಸಿಬಿ) ಆರೋಪಿ ವಿಕ್ರಮ್ ಬೈಸೊಯಾ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿತ್ತು. ಕೇಂದ್ರ ಸರ್ಕಾರ ಪ್ರಯತ್ನದಿಂದ ಆರೋಪಿಯನ್ನು ದುಬೈನಲ್ಲಿ ಬಂಧಿಸಿ, ಗಡೀಪಾರು ಮಾಡಲಾಗಿದೆ. ಸದ್ಯ ಏರ್ ಇಂಡಿಯಾ ವಿಮಾನ ಸಂಖ್ಯೆ 4310ರಲ್ಲಿ ಭಾರತಕ್ಕೆ ಕರೆತರಲಾಗಿದೆ.

ಮೂಲಗಳ ಪ್ರಕಾರ, 13,000 ಪ್ರಕರಣಗಳೊಂದಿಗೆ ನಂಟು ಹೊಂದಿದ್ದ ದೆಹಲಿ ಪೊಲೀಸರ ದೊಡ್ಡ ಡ್ರಗ್ಸ್ ಜಾಲದ ಪ್ರಮುಖ ಆರೋಪಿ ಸಂದೀಪ್ ಧುನಿಯಾನ ಆಪ್ತ ವಿಕ್ರಮ್ ಬೈಸೊಯಾ ಆಗಿದ್ದು, ದುಬೈನಿಂದ ಪಾಕಿಸ್ತಾನಕ್ಕೆ ಪರಾರಿಯಾಗಲು ಯಶಸ್ವಿಯಾಗಿದ್ದ ಎಂದು ತಿಳಿದುಬಂದಿದೆ.

ಈ ಕುರಿತು ಗೃಹ ಸಚಿವ ಅಮಿತ್ ಶಾ  ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಬೈಸೊಯಾನನ್ನು ಭಾರತಕ್ಕೆ ವಾಪಸ್ ಕರೆತಂದಿರುವುದು, ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಭಾರತ ಸರ್ಕಾರ ಸಾಧಿಸಿದ ದೊಡ್ಡ ಯಶಸ್ಸು ಎಂದು ಬಣ್ಣಿಸಿದ್ದಾರೆ. ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಡ್ರಗ್ಸ್ ಕಳ್ಳಸಾಗಣೆದಾರರನ್ನು ಪತ್ತೆಹಚ್ಚಲು ಮತ್ತು ಅವರ ಜಾಲವನ್ನು ಬೇಧಿಸಲು ಸರ್ಕಾರವು “ನಿರ್ದಾಕ್ಷಿಣ್ಯ ಧೋರಣೆಯನ್ನು” ಅನುಸರಿಸುತ್ತಿದೆ ಎಂದಿದ್ದಾರೆ.

ಮಾದಕ ವಸ್ತುಗಳ ಕಳ್ಳಸಾಗಣೆ ವಿರುದ್ಧ ಸರ್ಕಾರದ ಶೂನ್ಯ ಸಹಿಷ್ಣುತೆ ನೀತಿಯಲ್ಲಿ ಇದು ಹೊಸ ಮೈಲಿಗಲ್ಲು. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಯುಎಇಯಿಂದ ತಲೆಮರೆಸಿಕೊಂಡಿದ್ದ ಡ್ರಗ್ ಕಿಂಗ್‌ಪಿನ್ ವಿಕ್ರೇಂದರ್ ಸಿಂಗ್ ಬಸೊಯಾವನ್ನು ವಾಪಸ್ ಕರೆತಂದಿದೆ. ಡ್ರಗ್ಸ್ ಕಳ್ಳಸಾಗಣೆದಾರರು ಎಲ್ಲಿಯೇ ಅಡಗಿಕೊಂಡರೂ ಭಾರತೀಯ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ