Breaking News

ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ

Spread the love

ಕಲಬುರಗಿ: ಶಹಾಬಾದ್ ಪಟ್ಟಣದಲ್ಲಿನ ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಸೋಮನಹಳ್ಳಿ ಗ್ರಾಮದಿಂದ ಕೆಲ ದಿನಗಳ ಹಿಂದಷ್ಟೇ ಬಾಲಕಿ ಕಲಬುರಗಿಗೆ ಬಂದಿದ್ದು, ಬಳಿಕ ಆಕೆಯನ್ನು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿತ್ತು.

ತನ್ನ ಪೋಷಕರೊಂದಿಗೆ ಇತ್ತೀಚೆಗಷ್ಟೇ ಬಂದಿದ್ದ ಬಾಲಕಿಗೆ ಇಂದು ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕ್ವಾರಂಟೈನ್ ಕೇಂದ್ರದಲ್ಲಿದ್ದ ಇತರೆ ಮಹಿಳೆಯರೇ ಆಕೆಗೆ ಹೆರಿಗೆ ಮಾಡಿಸಲು ಸಹಕರಿಸಿದ್ದಾರೆ.

ಸೋಮನಹಳ್ಳಿಯಲ್ಲಿ ಬಾಲಕಿಯ ತಂದೆ ಹಾಗೂ ಸಹೋದರ ಕೆಲಸದ ನಿಮಿತ್ತ ಹೋಗಿ ಬಂದಿದ್ದು, ಬಳಿಕ ಮೂವರನ್ನು ಕ್ವಾರಂಟೈನ್ ನಲ್ಲಿರಿಸಲಾಗಿತ್ತು. ಬಾಲಕಿಗೆ ಹೆರಿಗೆಯಾಗಿದ್ದು, ಇದೀಗ ತಾಯಿ ಹಾಗೂ ಮಗು ಆರೋಗ್ಯವಾಗಿದೆ. ಶಹಬಾದ್ ಸಮುದಾಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು  ತಹಶೀಲ್ದಾರ್ ಸುರೇಶ್ ವರ್ಮಾ  ತಿಳಿಸಿದ್ದಾರೆ


Spread the love

About Laxminews 24x7

Check Also

ನಾಲ್ವಾರ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಸಿಎಂ ಭೇಟಿ – ಸಿದ್ದರಾಮಯ್ಯಗೆ ಚಿನ್ನದ ಉಂಗುರ ತೊಡಿಸಿ ಸತ್ಕಾರ

Spread the loveಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಸುಕ್ಷೇತ್ರ ನಾಲ್ವಾರ ಗ್ರಾಮದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ