Breaking News

ಕೊರೋನಾ ಹಿನ್ನೆಲೆಯಲ್ಲಿ ಬುಲೆಟ್ ಪ್ರಕಾಶ್ ಅಂತಿಮ ದರ್ಶನಕ್ಕೆ ಅವಕಾಶವಿಲ್ಲ: ಸಚಿವ ಆರ್​ ಅಶೋಕ್

Spread the love

ಬೆಂಗಳೂರು(ಏ. 06): ಕೊರೋನಾ ವೈರಸ್ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ​ನಟ ಬುಲೆಟ್ ಪ್ರಕಾಶ್ ಪಾರ್ಥಿವ ಶರೀರದ ಸಾರ್ವಜನಿಕರ ದರ್ಶನಕ್ಕೆ  ಅವಕಾಶ ನಿರಾಕರಿಸಲಾಗಿದೆ. ಇದೇ ರೀತಿಯಾಗಿ ಸೆಲೆಬ್ರಿಟಿಗಳು ಸಹ ಅಂತಿಮ ದರ್ಶನ ಪಡೆಯುವಂತಿಲ್ಲ. ಆದರೆ, ಸಂಬಂಧಿಕರಿಗಷ್ಟೇ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಸಚಿವ ಆರ್​ ಅಶೋಕ್​​​ ತಿಳಿಸಿದ್ದಾರೆ.

ಲಾಕ್ ಡೌನ್ ಮುಗಿದ ನಂತರ ಕಡಿಮೆ ಜನರು ಪೂಜೆ ಸಂಸ್ಕಾರದಲ್ಲಿ ಭಾಗಿಯಾಗಬಹುದು. ದೂರದಿಂದಲೇ ನಟ ಬುಲೆಟ್​​ ಪ್ರಕಾಶ್​ ಅವರಿಗೆ ನಮನ ಸಲ್ಲಿಸುವಂತೆ ಅಭಿಮಾನಿಗಳಲ್ಲಿ ಸಚಿವರು ಮನವಿ ಮಾಡಿದ್ದಾರೆ.

ಬುಲೆಟ್ ಪ್ರಕಾಶ್ ನನ್ನ ಒಳ್ಳೆಯ ಗೆಳೆಯ, ಪ್ರತಿ ತಿಂಗಳು ಇಬ್ಬರು ಭೇಟಿ ಮಾಡುತ್ತಿದ್ವಿ. ಕಿಡ್ನಿ ಟ್ರಾನ್ಸ್‌ಫಾರ್ಮೇಷನ್ ಆಗಬೇಕು ಸಹಾಯ ಮಾಡುವಂತೆ ಕೇಳಿದ. ನಾನು ಒಪ್ಪಿಕೊಂಡಿದ್ದೆ. ಮುಖ್ಯಮಂತ್ರಿಗಳು ಎರಡು ಲಕ್ಷ ರೂಪಾಯಿಯನ್ನು ಆಪರೇಷನ್​​ಗೆ ಕೊಡುವುದಾಗಿ ಒಪ್ಪಿದ್ದರು. ಆದರೆ ಈಗ ಅವರೇ ಇಲ್ಲ ಎಂದು ಸಚಿವ ಆರ್​ ಅಶೋಕ್ ಬೇಸರ ವ್ಯಕ್ತಪಡಿಸಿದರು.

ಅವರು ಇವತ್ತು ನಮ್ಮೊಂದಿಗೆ ಇಲ್ಲ ಅನ್ನೋದು ದುಃಖ ತಂದಿದೆ. ಇವತ್ತು ಅವರ ದೇಹವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿಲ್ಲ. ಬದಲಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗುತ್ತದೆ. ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯಲಿದೆ. ಆದರೆ, ಅಂತಿಮ ದರ್ಶನಕ್ಕೆ ಯಾವುದೇ ವ್ಯವಸ್ಥೆ ಮಾಡಲಾಗುವುದಿಲ್ಲ ಎಂದರು.


Spread the love

About Laxminews 24x7

Check Also

4 ವರ್ಷದಿಂದ ಗೃಹಬಂಧನದಲ್ಲಿ ಗೃಹಿಣಿ!

Spread the loveಚಿಕ್ಕಮಗಳೂರು: 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ