Breaking News

ಸಿಕ್ಕಸಿಕ್ಕವರ ಮೇಲೆ ಹುಚ್ಚುನಾಯಿ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ

Spread the love

ಹಾಸನ: ಸಿಕ್ಕ ಸಿಕ್ಕವರ ಮೇಲೆ ಹುಚ್ಚುನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಅರಕಲಗೂಡಿನ ಉಳ್ಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಚ್ಚುನಾಯಿಯ ದಾಳಿಯಿಂದ ಇಬ್ಬರು ಮಕ್ಕಳು ಸೇರಿ 8 ಮಂದಿ ಗಾಯಗೊಂಡಿದ್ದಾರೆ.

ರಾಜು, ರಘು, ಅಂಜಲಿ, ಮಂಜಯ್ಯ ಹಾಗೂ ಇಬ್ಬರು ಮಕ್ಕಳು ಸೇರಿದಂತೆ 8 ಜನರಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದೆ. ಗಾಯಾಳುಗಳಿಗೆ ಕೊಣನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹುಚ್ಚುನಾಯಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ