Breaking News

ಪ್ರಧಾನಿ ನಿವಾಸದ ಎದುರು ರಾಹುಲ್, ಪ್ರಿಯಾಂಕಾ ಧರಣಿ – ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು

Spread the love

ನವದೆಹಲಿ: ದೆಹಲಿಯಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ  ಅವರು ಇಂದು (ಮಂಗಳವಾರ) ಪ್ರಧಾನಿ ಮೋದಿ  ಅವರ ನಿವಾಸದ ಎದುರು ಧರಣಿ ನಡೆಸಿದರು.

ರಾಹುಲ್ ಗಾಂಧಿ ಅವರೊಂದಿಗೆ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ , ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಸಿಎಂ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಹೆಚ್ ಮುನಿಯಪ್ಪ ಸೇರಿದಂತೆ ಕಾಂಗ್ರೆಸ್‌ನ ಇತರ ನಾಯಕರು ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಗಳ ಅಧಿಕೃತ ನಿವಾಸದ ಎದುರು ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೂ ಆಗ್ರಹಿಸಿ ಘೋಷಣೆ ಕೂಗಿದರು.

ಈ ಕುರಿತು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ರಾಹುಲ್ ಗಾಂಧಿ, ʻನಿನ್ನೆ ಯುವ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸರ ಕ್ರೂರ ವರ್ತನೆ, ದೌರ್ಜನ್ಯಕ್ಕೆ ಪ್ರಧಾನಿ ಮೋದಿ ಅವರಿಂದ ಉತ್ತರ ಕೇಳಲು ನಾವಿಲ್ಲಿಗೆ ಬಂದಿದ್ದೇವೆ. ದೇಶದ ಯುವಜನರ ಭವಿಷ್ಯ ಹಾಳು ಮಾಡಿದ ಕಾರಣ ಪ್ರಧಾನಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕುʼ ಎಂದು ಆಗ್ರಹಿಸಿದರು.

ಇನ್ನೂ ಪ್ರಧಾನಮಂತ್ರಿಯವರ ನಿವಾಸವು ಭದ್ರತಾ ವಲಯವಾಗಿರುವ ಹಿನ್ನೆಲೆ, ಧರಣಿ ಅಂತ್ಯಗೊಳಿಸುವಂತೆ ಪೊಲೀಸರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು. ಆದ್ರೆ ಪೊಲೀಸರ ಮನವಿಗೆ ಒಪ್ಪದ ಹಿನ್ನೆಲೆ ರಾಹುಲ್‌ ಗಾಂಧಿ ಸೇರಿದಂತೆ ಕೆಲ ಕಾಂಗ್ರೆಸ್‌ ನಾಯಕರನ್ನ ವಶಕ್ಕೆ ಪಡೆದರು.

ಇದಕ್ಕೂ ಮುನ್ನ, ಸೋಮವಾರ CJP ಪ್ರತಿಭಟನೆಯ ವೇಳೆ ನಡೆದ ಪೊಲೀಸರ ಪ್ರಯೋಗದಿಂದ ಗಾಯಗೊಂಡವರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದೆಹಲಿಯ ರಾಮ ಮನೋಹರ್ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, CJP ಬೆಂಬಲಿಗರು ಸೋಮವಾರ ಸಂಸತ್ ಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವೇಳೆ ಪೊಲೀಸರ ಕ್ರಮ ಜರುಗಿತ್ತು.


Spread the love

About Laxminews 24x7

Check Also

ಒಂದೇ ದಿನ ಚಿತ್ರದುರ್ಗದಲ್ಲಿ ನಾಲ್ವರು ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

Spread the loveಚಿತ್ರದುರ್ಗ: ಚಿತ್ರದುರ್ಗದಲ್ಲಿ  ಬೀದಿ ನಾಯಿಗಳ (Stray Dog Attack) ದಾಳಿ ಮತ್ತೆ ಆತಂಕ ಮೂಡಿಸಿದೆ. ನಗರದ ಚೇಳಗುಡ್ಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ