ಗೋಕಾಕ: ನಗರದ ನಾಯಕ ಸ್ಟುಡೆಂಟ್ ಫೆಡರೆಷನ್ ಅನುದಾನಿತ ಮೆಟ್ರಿಕ್ ಪೂರ್ವ ಪರಿಶಿಷ್ಟ ವರ್ಗ ಬಾಲಕ , ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಷಿಕ ಕ್ರೀಡಾಕೂಟಕ್ಕೆ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು.
ಕ್ರೀಡಾ ಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಕ್ರೀಡೆಯಿಂದ ಆರೋಗ್ಯ ಸದೃಢವಾಗಿರಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ನೀಡಿದಷ್ಟೇ ಪ್ರಾಮುಖ್ಯತೆನ್ನು ಕ್ರೀಡೆಗೂ ನೀಡಬೇಕು. ನಮ್ಮ ತಂದೆ ಅವರು ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಕಳೆದ 2 ದಶಕಗಳಿಂದ ಹಲವಾರು ಕ್ರೀಡಾಪಟುಗಳು ರಾಷ್ಟ್ರ ಮತ್ತು ರಾಜ್ಯದಲ್ಲಿ ಗುರುತಿಸಿಕೊಂಡಿದ್ದಾರೆ. ತಾವು ಕೂಡ ತಂದೆಯ ಮಾರ್ಗದಲ್ಲಿಯೇ ನಡೆಯುವುದಾಗಿ ರಾಹುಲ್ ಜಾರಕಿಹೊಳಿ ಅವರು ಹೇಳಿದರು.
ಎನ್ಎಸ್ ಫ್ ಶಾಲಾ ಪ್ರಾಚಾರ್ಯ ತಿಪ್ಪಣ್ಣ ಕೋಳಿ, ವಿದ್ಯಾರ್ಥಿ ನಿಲಯ ಮೇಲ್ವಿಚಾರಕಿ ಶ್ರೀದೇವಿ ಮಂದಾನಿ, ಪಿ.ಎಲ್. ಕಂಬಾಳ ಸೇರಿದಂತೆ ಮುಂತಾದವರು ಇದ್ದರು.
Check Also
ಕಂಬಳ ಅತ್ಯಂತ ಜನಪ್ರಿಯ ಗ್ರಾಮೀಣ ಕ್ರೀಡೆ: ಸಿಎಂ ಸಿದ್ದರಾಮಯ್ಯ
Spread the love ಮಂಗಳೂರು : ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ …