ರಾಯಚೂರು: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನವಾದ ಘಟನೆ ತಾಲೂಕಿನ ಕಲ್ಮಲ ಸಮೀಪ ಸಂಭವಿಸಿದೆ.
ಮೃತ ಕಾರು ಚಾಲಕನನ್ನು ಮಲ್ಲಟ ಗ್ರಾಮದ ಸದಾನಂದಗೌಡ ಮಾಲೀಪಾಟೀಲ (60) ಎಂದು ಗುರುತಿಸಲಾಗಿದೆ.
ಮಲ್ಲಟದಿಂದ ರಾಯಚೂರು ಕಡೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡದಿದೆ. ಇದರಿಂದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣದಲ್ಲೇ ಹೊತ್ತಿ ಉರಿದಿದೆ. ಕಾರು ಲಾಕ್ ಆಗಿರುವ ಕಾರಣ ಚಾಲಕ ಹೊರಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ.
ಗ್ರಾಮದ ಹೊರವಲಯದಲ್ಲಿ ಘಟನೆ ಸಂಭವಿಸಿದ ಹಿನ್ನೆಲಯಲ್ಲಿ ತಕ್ಷಣ ಬೆಂಕಿ ನಂದಿಸಲು ಸಾರ್ವಜನಿಕರಿಗೆ ಸಾಧ್ಯವಾಗಿಲ್ಲ.
ಅಗ್ನಿ ಶಾಮಕದಳ ಬರುವ ವೇಳೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ಬಳಿಕ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Laxmi News 24×7