Breaking News

ಪೊಲೀಸರ ಎದುರೇ ವಿದ್ಯಾರ್ಥಿ ತಾಯಿಗೆ ಕಪಾಳಮೋಕ್ಷ

Spread the love

ರಾಯಚೂರು: ವಿದ್ಯಾರ್ಥಿಗೆ 80,000 ರೂ ಪೀಸ್ ಡಿಮ್ಯಾಂಡ್ ಮಾಡಿ ಕಿರುಕುಳ ನೀಡುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿ ತಾಯಿಗೆ ಪೊಲೀಸರ ಎದುರೇ ಕಪಾಳಮೋಕ್ಷ ಮಾಡಿದ ಮೊಂಟೆಸರಿ ಶಾಲೆ ಮುಖ್ಯಸ್ಥ ಸತೀಶ್ ಕುಮಾರ್ ಹಾಗೂ ಆತನ ಪತ್ನಿ ಇಬ್ಬರನ್ನು ಬಂಧಿಸಲಾಗಿದೆ.

10ನೇ ತರಗತಿ ವಿದ್ಯಾರ್ಥಿ ಸಂಪತ್ ಗೆ ತಾವು ಹೇಳಿದಷ್ಟು ಹಣವನ್ನು ಕಟ್ಟಬೇಕು ಎಂದು ಶಾಲೆಯ ಮುಖ್ಯಸ್ಥರು ಪ್ರತಿದಿನ ಕಿರುಕುಳ ನೀಡಿತ್ತಿದ್ದರು. ಇದರಿಂದ ಬೇಸತ್ತ ಸಂಪತ್ ಪೋಷಕರು ಟಿಸಿ ಕೊಡುವಂತೆ ಕೇಳಿಕೊಂಡಿದ್ದರು. ಟಿಸಿ ಕೊಡಲು ನಿರಾಕರಿಸಿದ್ದ ಶಾಲೆ ಮುಖ್ಯಸ್ಥರು ಪೀಸ್ ಕಟ್ಟುವಂತೆ ಒತ್ತಾಯಿಸಿದ್ದರು.

ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ವಿಚಾರಣೆಗೆಂದು ಶಾಲಾ ಮುಖ್ಯಸ್ಥ ಸತೀಶ್ ಕುಮಾರ್ ಹಾಗೂ ಸಂಪತ್ ಪೋಷಕರನ್ನು ಕರೆಸಲಾಗಿತ್ತು. ಈ ವೇಳೆ ರೊಚ್ಚಿಗೆದ್ದ ಶಾಲಾ ಮುಖ್ಯಸ್ಥ ಸತೀಶ್ ಕುಮಾರ್, ಸಂಪತ್ ತಾಯಿಗೆ ಪೊಲೀಸರೆದುರೇ ಕಪಾಳಮೋಕ್ಷ ಮಾಡಿ ಜೀವಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಸತೀಶ್ ಕುಮಾರ್ ಹಾಗೂ ಪತ್ನಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.


Spread the love

About Laxminews 24x7

Check Also

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

Spread the loveರಾಯಚೂರು: ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಲವೆಡೆ ಸಜ್ಜೆ, ಜೋಳದ ಬೆಳೆ ಹಾಳಾಗಿದ್ದು, ರೈತರು ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ