Home / ಜಿಲ್ಲೆ / ಹಿಂಬಾಗಿಲಿನಿಂದ ಮದ್ಯ ಮಾರಾಟಕ್ಕೆ ಮುಂದಾದ ಮಾಲೀಕ ಅರೆಸ್ಟ್

ಹಿಂಬಾಗಿಲಿನಿಂದ ಮದ್ಯ ಮಾರಾಟಕ್ಕೆ ಮುಂದಾದ ಮಾಲೀಕ ಅರೆಸ್ಟ್

Spread the love

ರಾಯಚೂರು: ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಹಿನ್ನೆಲೆ ಇಡೀ ದೇಶಾದ್ಯಂತ ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲಾಗಿದೆ.

ಲಾಕ್‍ಡೌನ್ ಹಿನ್ನೆಲೆ ಬಾರ್ ಗಳ ಬೀಗಕ್ಕೆ ಸೀಲ್ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಲಿಂಗಸುಗೂರಿನ ಹಟ್ಟಿಯಲ್ಲಿ ಬಾರ್ ಮಾಲೀಕನೋರ್ವ ತನ್ನ ಅಂಗಡಿಯಲ್ಲಿನ ಮದ್ಯವನ್ನು ಹಿಂಬಾಗಿಲಿನಿಂದ ತಾನೇ ಕದ್ದು ಮಾರಾಟ ಮಾಡಲು ಮುಂದಾದ ವೇಳೆ ಸಿಕ್ಕಿಬಿದ್ದಿದ್ದಾನೆ

ಇಲ್ಲಿನ ಕೋಹಿನೂರ್ ಬಾರ್ ಅಂಡ ರೆಸ್ಟೋರೆಂಟ್ ನಲ್ಲಿ ಮದ್ಯ ಹಾಗೂ ನಗದು ಹಣವನ್ನು ತೆಗೆಯುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ 1 ಲಕ್ಷ 5 ಸಾವಿರದ 650 ರೂ. ನಗದು ಹಾಗೂ 2,750 ರೂ ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ. ಅಕ್ರಮ ಮಾರಾಟಕ್ಕೆ ಮದ್ಯ ಕದ್ದ ಬಾರ್ ಮಾಲೀಕ ಜಿಯಾಹುಸೇನ್ ಹಾಗೂ ಕೆಲಸಗಾರರಾದ ಚಿರಂಜೀವಿ, ವೆಂಕಟೇಶ್ ಅನ್ನು ಬಂಧಿಸಲಾಗಿದೆ.

ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ:ಮೋದಿ

Spread the love ಜೈಪುರ (ಏ.22): ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಮಾಡಲಿದೆ’ ಎಂಬ ಆ ಪಕ್ಷದ ಭರವಸೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ