ಬೆಂಗಳೂರು: ಕೊರೊನಾ ಅಬ್ಬರದ ಮಧ್ಯೆ ವರುಣರಾಯ ಕೂಡ ರಾಜ್ಯದ ಕೆಲವೆಡೆ ಅಬ್ಬರಿಸಿದ್ದಾನೆ.
ಧಾರವಾಡ, ಶಿವಮೊಗ್ಗ, ದಾವಣಗೆರೆ, ವಿಜಯಪುರ ಸೇರಿ ಹಲವೆಡೆ ಧಾರಕಾರ ಮಳೆಯಾಗಿದೆ. ವಿಜಯಪುರದ ಮುದ್ದೇಬಿಹಾಳ ತಾಲೂಕಿನ ಹಳ್ಳೂರಿನಲ್ಲಿ ಸಿಡಿಲು ಹೊಡೆದು ರೈತ ಗುಂಡಪ್ಪ ಸಾವನ್ನಪ್ಪಿದ್ದಾರೆ. ಶಿವಮೊಗ್ಗದಲ್ಲಿ ಗುಡುಗು, ಸಿಡಿಲ ಮಳೆಗೆ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು ಭಾರೀ ಅನಾಹುತ ತಪ್ಪಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಮಕ್ಕಳನ್ನು ಸುರಕ್ಷಿತವಾಗಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ