Breaking News

ಬೆಂಗಳೂರು: ಕೊರೊನಾ ಆತಂಕದ ನಡುವೆ ಸೋಮವಾರ ವರುಣದೇವ ಅಬ್ಬರಿಸಿದ್ದಾರೆ. ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಇಂದಿನಿಂದ ಎರಡು ದಿನ ಭಾರೀ ಮಳೆಯಾಗಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರಲ್ಲಿ ಸೋಮವಾರ ರಾತ್ರಿ ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್, ಶಿವಾಜಿನಗರ, ರಾಜಾಜಿನಗರ, ಶಿವಾನಂದ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ನಗರದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Spread the love

ಬೆಂಗಳೂರು: ಕೊರೊನಾ ಆತಂಕದ ನಡುವೆ ಸೋಮವಾರ ವರುಣದೇವ ಅಬ್ಬರಿಸಿದ್ದಾರೆ. ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಇಂದಿನಿಂದ ಎರಡು ದಿನ ಭಾರೀ ಮಳೆಯಾಗಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರಲ್ಲಿ ಸೋಮವಾರ ರಾತ್ರಿ ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್, ಶಿವಾಜಿನಗರ, ರಾಜಾಜಿನಗರ, ಶಿವಾನಂದ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ನಗರದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಚಾಮರಾಜನಗರದಲ್ಲಿ ರಾತ್ರಿ ಸುರಿದ ಮಳೆಗೆ ನೂರಾರು ಎಕರೆ ಬಾಳೆ ನೆಲಸಮವಾಗಿದೆ. ಹನೂರು ತಾಲೂಕಿನ ಮಿಣ್ಯ ಗ್ರಾಮದಲ್ಲಿ ಬೀಸಿದ ಭಾರೀ ಗಾಳಿಗೆ ಬಾಳೆ, ಟೊಮಟೋ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಮಂಡ್ಯ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಅಲ್ಲಲ್ಲಿ ವಿದ್ಯುತ್ ಕಡಿತವಾಗಿದೆ. ಮಳೆಯಿಂದ ರೈತರು ಸಂತಸಗೊಂಡಿದ್ದಾರೆ.

ಕಾಫಿನಾಡು ಚಿಕ್ಕಮಗಳೂರಲ್ಲೂ ವರುಣರಾಯ ಅಬ್ಬರಿಸಿದ್ದಾನೆ. ಗುಡುಗು-ಸಿಡಿಲಿನ ಕೂಡಿದ ಧಾರಾಕಾರ ಮಳೆಯಾಗಿದೆ. ಮಲೆನಾಡು ಭಾಗದಲ್ಲೂ ಮೋಡ ಕವಿದ ವಾತಾವರಣವಿದ್ದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇತ್ತ ಕೋಲಾರ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಯಲುಸೀಮೆಗೆ ವರುಣ ತಂಪೆರೆದಿದ್ದಾನೆ. ಕುಡಿಯಲು ನೀರು, ಮೇವು ಸಿಗದೇ ಕಂಗಾಲಾಗಿದ್ದ ಜಿಲ್ಲೆಯ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.


Spread the love

About Laxminews 24x7

Check Also

ಲಾರ್ಡ್ ಗಾಗಾ ಸಿನಿಮಾ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ನಿರ್ದೇಶಕ ಶೂನ್ಯ.

Spread the loveಬೆಂಗಳೂರು: ಹೆಡ್ ಬುಷ್ ಮತ್ತು ರೋಸಿ ಸಿನಿಮಾಗಳ ಸೂತ್ರಧಾರ ಶೂನ್ಯ ಈಗ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿಯುತ್ತಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ