ಹರಿಹರ (ರಾಜನಹಳ್ಳಿ): ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಬೆಳಗಾವಿಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಸ್ವಾಮೀಜಿ ಯವರನ್ನು ಸನ್ಮಾನಿಸಿ ಮಾತನಾಡಿ, “ಬೆಳಗಾವಿ ಹುಕ್ಕೇರಿ ಹಿರೇಮಠ ಎಲ್ಲ ಸಮುದಾಯದೊಂದಿಗೆ ಬೆರೆತು ಕಾರ್ಯವನ್ನು ಮಾಡುತ್ತಿದೆ. ವಾಲ್ಮೀಕಿ ಪೀಠದ ಗುರುಗಳಿಗೆ ಗೌರವಿಸಿದ್ದು ನನಗೆ ಅತೀವ ಸಂತಸ ತಂದಿದೆ” ಎಂದು ಹೇಳಿದರು.
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, “ವಾಲ್ಮೀಕಿ ಸಮುದಾಯ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ರಾಜ್ಯದ ಹಳ್ಳಿ-ಹಳ್ಳಿಯಲ್ಲೂ ವಾಲ್ಮೀಕಿ ಸಮಾಜ ಇದೆ” ಎಂದರು.
ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರು ಹುಕ್ಕೇರಿ ಹಿರೇಮಠದ ಬಗ್ಗೆ ಅಪಾರ ಗೌರವ ವ್ಯಕ್ತಪಡಿಸಿದರು. ವಾಲ್ಮೀಕಿ ಯುವಸೇನೆಯ ರಾಜ್ಯಾಧ್ಯಕ್ಷ ಶ್ರೀನಿವಾಸ್ ನಾಯಕ್, ಮಹಾಂತ ಶಿವಯೋಗಿ ಸ್ವಾಮೀಜಿ ಇದ್ದರು.
Laxmi News 24×7