Breaking News

ಅನೈತಿಕ ಸಂಬಂಧ ಶಂಕೆ – ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದ ಪತಿ

Spread the love

ರಾಮನಗರ: ಕೌಟುಂಬಿಕ ಕಲಹ ಹಾಗೂ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ  ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳೇಗೌಡನಪಾಳ್ಯದಲ್ಲಿ ನಡೆದಿದೆ.

ಸಿಂಚನ(21) ಕೊಲೆಯಾದ ಮಹಿಳೆ, ಪತಿ ರೇಣುಕಯ್ಯ ಎಂಬಾತನೇ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಪತ್ನಿಯ ಶೀಲ ಶಂಕಿಸಿ ಆಗಾಗೆ ರೇಣುಕಯ್ಯ ಗಲಾಟೆ ಮಾಡ್ತಿದ್ದ. ಅದರಂತೆ ಶುಕ್ರವಾರವೂ ಕೂಡ (ಫೆ.20) ಕೂಡ ಗಲಾಟೆ ನಡೆಸಿ ಮನೆಮುಂದೆಯೇ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನೆ ಮಾಡಿದ್ದಾರೆ. ಆರೋಪಿ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.


Spread the love

About Laxminews 24x7

Check Also

ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ, ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ

Spread the loveಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿಯ  ಕ್ಷೇತ್ರದಲ್ಲಿ ಮತದಾನವಾಗಿರುವ ಒಟ್ಟು ಪೋಸ್ಟಲ್ ಬ್ಯಾಲೆಟ್​ನಲ್ಲಿ ತಿರಸ್ಕೃತಗೊಂಡಿರುವ 279 ಮತಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ