Breaking News

ಬಿಡದಿ ಟೌನ್‌ಶಿಪ್ ವಿರುದ್ಧ ಮುಂದುವರಿದ ಹೋರಾಟ – ಉಪವಾಸ ಸತ್ಯಾಗ್ರಹ ಆರಂಭಿಸಿದ ರೈತರು

Spread the love

ರಾಮನಗರ: ಬಿಡದಿ ಟೌನ್‌ಶಿಪ್  ವಿರುದ್ಧ ರೈತರ ಹೋರಾಟ ಮುಂದುವರಿದಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ರೈತರು ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಬಿಡದಿ- ಹಾರೋಹಳ್ಳಿ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದ ರೈತರು, ರಸ್ತೆ ಮಧ್ಯೆ ಎತ್ತಿನ ಗಾಡಿ, ಟ್ರಾಕ್ಟರ್ ನಿಲ್ಲಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊರಕೆ ಹಿಡಿದು ಕುಳಿತ ಮಹಿಳೆಯರು ಸರ್ಕಾರದ ವಿರುದ್ಧ ಕಿಡಿಕಾರಿದರು. ಕೂಡಲೇ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸಬೇಕು. ಸರ್ಕಾರ ರಚನೆ ಮಾಡಿದ ಸಮಿತಿ ಕಾರ್ಯಾರಂಭ ಮಾಡುತ್ತಿಲ್ಲ. ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ರೈತರ ಪ್ರತಿಭಟನೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಪೊಲೀಸರ ಅಡ್ಡಿ ನಡುವೆಯೂ ರೈತರು ರಸ್ತೆ ಮಧ್ಯೆ ಚೇರ್ ಹಾಕಿ ಪ್ರತಿಭಟನೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

Spread the loveಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ