ರಾಮದುರ್ಗ: ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿ ಚಿಹ್ನೆಯನ್ನು ತಪ್ಪಾಗಿ ಮುದ್ರಿಸಿರುವ ಹಿನ್ನೆಲೆ ಕದಂಪೂರ ವಾರ್ಡ್ ನಂಬರ್ 6 ರ ಚುನಾವಣೆ ಮುಂದೂಡಿಕೆ ಮಾಡಲಾಗಿದೆ.
ತಾಲೂಕಿನ ಕದಂಪೂರ ಗ್ರಾಮದಲ್ಲಿ 6 ನೇ ವಾರ್ಡ್ಗೆ ನಿರ್ಮಲಾ ಮಹಾಂತೇಶ ಖಾನಪೇಟ್ ಎಂಬುವರು ಸ್ಪರ್ಧಿಸಿದ್ದಾರೆ. ಇವರಿಗೆ ಬಕೆಟ್ ಚಿಹ್ನೆ ನೀಡಲಾಗಿತ್ತು. ಆದರೆ ಮತದಾನದ ಬ್ಯಾಲೆಟ್ ಪೇಪರ್‌ನಲ್ಲಿ ‘ಬಕೆಟ್’ ಚಿಹ್ನೆ ಬದಲು ‘ಅಲ್ಮೇರಾ’ ಚಿಹ್ನೆ ಮುದ್ರಣವಾಗಿದೆ. ಇದರಿಂದಾಗಿ ಮತದಾನ ಮೂಂದೂಡಿಕೆ ಮಾಡಲಾಗಿದೆ.
ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಲೆಟ್ ಪೇಪರ್ ಯಡವಟ್ಟಿನಿಂದ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಬೇಕಿದ್ದ ಮತದಾನ ಸ್ಥಗಿತಗೊಳಿಸಲಾಗಿದೆ. ಕದಂಪೂರ ವಾರ್ಡ್ ನಂಬರ್ 6 ರಲ್ಲಿ ನಡೆಯಬೇಕಿದ್ದ ಮತದಾನ ನಾಳೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.