Breaking News

ಬೆಳಗಾವಿ ಒಂದಿಂಚೂ ಜಾಗ ಬಿಡುವ ಪ್ರಶ್ನೆ ಇಲ್ಲ: ಸಚಿವ ರಮೇಶ ಜಾರಕಿಹೊಳಿ ಮಹಾ ಸಿಎಂಗೆ ತಿರುಗೇಟು!!

Spread the love

ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ.

ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ ಕೆರಳಿಸುವ ಯತ್ನ ಮಾಡುವುದನ್ನು ನಿಲ್ಲಿಸಬೇಕು ಎಂದರು.

ರಾಜ್ಯದ ಒಂದಿಂಚೂ ಜಾಗ ಬಿಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿಯ ಉದ್ಧಟತನದ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಕನ್ನಡ ನಾಡಿನ ನೆಲ,ಜಲ ಮತ್ತು ಭಾಷೆಯ ರಕ್ಷಣೆಗೆ ನಾವು ಕಟಿಬದ್ಧರಾಗಿದ್ದೇವೆ. ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿ ನಡೆದುಕೊಂಡರೇ ಪ್ರತ್ಯುತ್ತರ ನೀಡಲು ನಾವೂ ಸಿದ್ಧ ಎಂದು ಹೇಳಿದರು.


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ಪ್ರಕರಣದಲ್ಲಿ ಡಿಸೇಲ್(ಪೆಟ್ರೋಲಿಯಮ್ ಉತ್ಪನ್ನ)ವನ್ನು ವಶ

Spread the loveಮಾಳಮಾರುತಿ ಪೊಲೀಸ್ಪ್ರಕರಣದಲ್ಲಿ ಸುಮಾರು 12,00,000/- ರೂ.ಗಳ ಟಾಟಾ ಕಂಪನಿಯ ಟ್ಯಾಂಕರ್ ನೇದ್ದರ ವಾಹನ ಹಾಗೂ ಅದರಲ್ಲಿದ್ದ 15,00,000/- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ