ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಯಾಗಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಇಲ್ಲವೇ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ಹೇಳಿದರು.
ಗುರುವಾರದಂದು ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಪಂಚಾಯತ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ತಡವಾಗಿದೆ. ಈ ತಿಂಗಳ ಕೊನೆಯಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಆಗುವ ಸಾಧ್ಯತೆ ಇದೆ ಎಂದ್ರು. ಇನ್ನು ಪರಿಷತ್ ಗದ್ದಲಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ರಮೇಶ ಜಾರಕಿಹೊಳಿ ಸಭಾಪತಿ ಪ್ರತಾಪ್‍ಸಿಂಗ್ ಒಳ್ಳೆಯ ವ್ಯಕ್ತಿ. ಆದರೇ ಅವರಿಗೆ ಬಹುಮತವಿಲ್ಲ. ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದು ಒಳ್ಳೆಯದು ಎಂದ್ರು.
ಇನ್ನು ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ನಡೆಯಲಿದೆ. ಹೈಕಮಾಂಡ್ ಯಾರನ್ನ ಸೂಚಿಸುತ್ತದೋ ಅವರನ್ನ ಗೆಲ್ಲಿಸಲೂ ಪ್ರಯತ್ನಿಸಲಾಗುವುದು. ಅದೇ ರೀತಿ ತಾಲೂಕುಗಳ ವಿಂಗಡಣೆಯಾಗಿ ಗೋಕಾಕ್ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯಾದರೇ ಒಳ್ಳೆಯದು ಎಂದರು.
ಇನ್ನು ಲಖನ್ ಜಾರಕಿಹೊಳಿಯೊಂದಿಗಿನ ವೈರಲ್ ಫೋಟೊ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ರಮೇಶ ಜಾರಕಿಹೊಳಿ, ನಾವೂ ರಾಜಕೀಯದಲ್ಲಿ ಬೇರೆ ಬೇರೆ ಆದರೇ ಮನೆಯ ಸಮಾರಂಭದಲ್ಲಿ ಒಂದೇ ಎಂದ್ರು ಮತ್ತೊಮ್ಮೆ ತಮ್ಮ ಕುಟುಂಬದ ಒಗ್ಗಟ್ಟನ್ನ ಪ್ರದರ್ಶಿಸಿದರು.
ಇನ್ನು ಮಾಧ್ಯಮಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ರಮೇಶ ಜಾರಕಿಹೋಳಿ ತಮ್ಮ ಪುತ್ರ ಸದ್ಯದಲ್ಲೇ ರಾಜಕೀಯಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.