Breaking News

ಅವಸಾನದ ಅಂಚಿನಲ್ಲಿನ 5 ಸರ್ಕಾರಿ ಶಾಲೆಗಳನ್ನ ದತ್ತು ಪಡೆದ ಸಚಿವ ರಮೇಶ್ ಜಾರಕಿಹೊಳಿ

Spread the love

ಬೆಳಗಾವಿ :  ಗೋಕಾಕ್ ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿರುವ ಸರ್ಕಾರಿ  ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸೇರಿ ಒಟ್ಟು ಐದು ಶಾಲೆಗಳನ್ನು  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ದತ್ತು‌ ಪಡೆದು, ಮಾನವೀಯತೆ ಮೆರೆದಿದ್ದಾರೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಗೋಕಾಕ್‌ ತಾಲ್ಲೂಕಿನಲ್ಲಿರುವ ಖನಗಾಂವ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ, ಮಮದಾಪೂರದ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ, ಅಂಕಲಗಿಯ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಧುಪಧಾಳದ ಮತ್ತು ಸುಲಧಾಳ ಗ್ರಾಮದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದಾರೆ. ಈ ಶಾಲೆಗಳ ಸಮಗ್ರ ಅಭಿವೃದ್ಧಿಗೆ ರೂಪು ರೇಷೆ ಸಿದ್ಧಪಡಿಸುವತ್ತ ಗಮನ ಹರಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಲ್ಲಾ ಜನಪ್ರತಿನಿಧಿಗಳಿಗೆ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವಂತೆ ಮನವಿ ಮಾಡಿದ್ದರು.

ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮತ್ತು ಸಾಮಾಜಿಕ ಕಳಕಳಿಯುಳ್ಳ ಸಂಸ್ಥೆಗಳು ತಮ್ಮ ಜವಾಬ್ದಾರಿ ಅರಿತು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಬೇಕೆಂಬ ಸರ್ಕಾರದ ಕಾಳಜಿಗೆ ಸ್ಪಂದನೆ ದೊರೆಯುತ್ತಿದೆ.

ಏನೀ ಯೋಜನೆ:

ರಾಜ್ಯದಲ್ಲಿ 43,447 ಸರ್ಕಾರಿ ಪ್ರಾಥಮಿಕ ಶಾಲೆಗಳು ಮತ್ತು 3.029 ಪ್ರೌಢಶಾಲೆಗಳಿದ್ದು, ಶಿಕ್ಷಣ ಇಲಾಖೆಗೆ ವಾರ್ಷಿಕ ನೀಡಲಾಗುವ ಅನುದಾನದಲ್ಲಿ ಶೇ.90ರಷ್ಟು ಶಿಕ್ಷಕರ ಭತ್ಯೆಗೆ ಖರ್ಚಾಗುತ್ತಿದ್ದು, ಇನ್ನುಳಿದ ಶೇ.10ರಷ್ಟು ಅನುದಾನದಲ್ಲಿ ಶಾಲೆಗಳ ಅಭಿವೃದ್ಧಿ ಕಷ್ಟಸಾಧ್ಯ. ಈ ಹಿನ್ನೆಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಅನುವಾಗುವಂತೆ ರಾಜ್ಯ ಸರ್ಕಾರವು ಶಾಲಾ ದತ್ತು ಯೋಜನೆ ಯನ್ನು ಹೊಂದಿದ್ದು, ಹತ್ತು ಹಲವು ಉದ್ಯಮಿಗಳು ಈಗಾಗಲೇ ಹಲವು ಶಾಲೆಗಳನ್ನು ದತ್ತು ಪಡೆದುಕೊಂಡಿದ್ದಾರೆ.

ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡವರ ಸಹಾಯದಿಂದ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಜತೆ ಜತೆಗೆ ಗುಣಮಟ್ಟದ ಶಿಕ್ಷಣ ನೀಡುವಂತೆ ಮಾಡುವುದು ಸರ್ಕಾರದ ಆಲೋಚನೆ ಆಗಿದ್ದು, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಹಲವು ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಕ್ಷೀಣಿಸುತ್ತಿರುವ ಮತ್ತು ಸರ್ಕಾರಕ್ಕೆ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿದ್ದು, ತಮ್ಮ ಕ್ಷೇತ್ರದ ಐದು ಶಾಲೆಗಳನ್ನು ಪಡೆದುಕೊಂಡು ಅಭಿವೃದ್ಧಿ ಪಡಿಸಲು ಹೆಜ್ಜೆ ಇಟ್ಟಿರುವುದು ಇತರ ರಾಜಕಾರಣಿಗಳಿಗೆ ‘ಸಾಹುಕಾರ್’ ಮಾದರಿಯಾಗಿದ್ದಾರೆ.

ಉತ್ತಮ ಶಿಕ್ಷಣದಿಂ ಸುಭದ್ರ ಸಮಾಜ ನಿರ್ಮಾಣ ಸಾಧ್ಯ ಎಂಬುವುದರಲ್ಲಿ ನಂಬಿಕೆ ಇದೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ಮಾರ್ಗದರ್ಶನದಲ್ಲಿ ಸಾಗಿ ಬಂದಿದ್ದೇನೆ.  ಅವರ ಪ್ರಮುಖ ಆಶಯದಂತೆ “ಸರ್ವರಿಗೂ ಶಿಕ್ಷಣ” ನೀಡಬೇಕೆಂಬ ಮಹದಾಸೆಯಿಂದ ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಈ ಶಾಲೆಗಳನ್ನು ಯಾವುದೇ ಹೈಟೆಕ್ ಶಾಲೆಗಿಂದ ಕಡಿಮೆ ಇಲ್ಲದಂತೆ ಮಾದರಿ ಶಾಲೆಗಳನ್ನಾಗಿ ರೂಪಿಸುವ ಕನಸು ಹೊಂದಿದ್ದೇನೆ.”

– ರಮೇಶ್ ಜಾರಕಿಹೊಳಿ
ಜಲಸಂಪನ್ಮೂಲ ಸಚಿವ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ