ಬೆಂಗಳೂರು : ವಿಧಾನಪರಿಷತ್ತಿನ ಉಪ ಸಭಾಪತಿಯಾಗಿದ್ದ ಎಸ್. ಎಲ್ ಧರ್ಮೇಗೌಡ ರ ಹಠಾತ್ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಜ್ಜನ ವ್ಯಕ್ತಿಯಾಗಿದ್ದ ಧರ್ಮೇಗೌಡರು ಬೀರೂರು ಕ್ಷೇತ್ರದ ಶಾಸಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಸಹಕಾರಿ ರಂಗದ ಹಿರಿಯ ಧುರೀಣರಾಗಿದ್ದರು.
ಇತ್ತೀಚಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಉಪ ಸಭಾಪತಿಗಳಾಗಿ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೂಕ್ಷ್ಮ ಮನಸ್ಸಿನ ರಾಜಕಾರಿಣಿಯನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಎಸ್.ಎಲ್. ಧರ್ಮೇಗೌಡರ ನಿಧನದಿಂದ ಮನಸ್ಸಿಗೆ ತೀವ್ರ ನೋವುಂಟಾಗಿದ್ದು, ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಹಾಗೂ ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡಂತಾಗಿದೆ.
ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ, ಕಾರ್ಯಕರ್ತರಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Laxmi News 24×7