ಗೋಕಾಕ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿ.ಸಿ. ರಸ್ತೆ, ಚರಂಡಿ, ಪ್ರೀಕಾಸ್ಟ್ ಪೇವರ್ಸ್ ರಸ್ತೆ, ತೆರದ ಭಾಂವಿ, ಸಮುದಾಯ ಭವನ ಹಾಗೂ ಪಿಕ್-ಅಪ್ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೆಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.
2019-20ನೇ ಸಾಲಿನ ವಿಶೇಷ ಘಟಕ (ಎಸ್‍ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‍ಪಿ) ಯೋಜನೆಗಳ ಅಡಿ 30 ಕೋಟಿ ರೂ. ಮತ್ತು ಅದೇ ಅವಧಿಯ ಉಳಿಕೆ ಅನುದಾನದಲ್ಲಿ 31.05 ಕೋಟಿ ರೂ.ಗಳ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳ ಅಭಿವೃದ್ಧಿಗಾಗಿ ಮಂಬರುವ ಆರ್ಥಿಕ ವರ್ಷದಲ್ಲಿ 100 ಕೋಟಿ ರೂ.ಗಳ ಅನುದಾನ ಮಂಜೂರಾತಿಗೆ ಕ್ರಿಯಾ ಯೋಜನೆಯೊಂದನ್ನು ಸಿದ್ಧಪಡಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ರವಾನಿಸಲಾಗಿದ್ದು, ಇದೇ ಮಾರ್ಚ ಅಂತ್ಯದ ವೇಳೆಗೆ ಅನುದಾನ ಬಿಡುಗಡೆಗೊಳ್ಳುವ ನಿರೀಕ್ಷೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.