ಮೈಸೂರು: ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು.ಈ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳಾದ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ.
ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಟೀಂ I ಇಂದು ನಂಜನಗೂಡು ಶ್ರೀಕಂಠೇಶ್ವರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಮಹೇಶ ಕುಮಟಳ್ಳಿ, ಆರ್ ಶಂಕರ್, ಮಾಜಿ ಶಾಸಕ ನಾಗರಾಜು ಕೂಡ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ, ಉಪ ಚುನಾವಣೆಯಲ್ಲಿ ಗೆದ್ದ 11 ಶಾಸಕರಿಗೂ ಸಚಿವ ಸ್ಥಾನ ಸಿಗಲಿದೆ ಮಾಧ್ಯಮಗಳಲ್ಲಿ ಕೇಲವ 5 ರಿಂದ 6 ಶಾಸಕರಿಗೆ ಮಾತ್ರ ಸಚಿವ ಸ್ಥಾನ ಸಿಗಲಿದೆ ಎಂದು ಬರುತ್ತಿದೆ. ಇದರ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದ್ರೆ ಉಪ ಚುನಾವಣೆಯಲ್ಲಿ ಗೆದ್ದ 11 ಶಾಸಕರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ರಮೇಶ ಜಾರಕಿಹೊಳಿ ಅವರು ತಿಳಿಸಿದರು.
ಚುನಾವಣೆಯಲ್ಲಿ ಸೋತ ಎಚ್. ವಿಶ್ವನಾಥ್ ಮತ್ತು ಎಂ.ಟಿ. ನಾಗರಾಜ್ ಅವರು ಸಚಿವರಾಗಬೇಕು ಎಂಬುವುದು ನಮ್ಮ ಒತ್ತಾಯ, ಪಕ್ಷ ಸಿದ್ದಾಂತ ಒಪ್ಪಿ ನಾವು ಬಿಜೆಪಿಗೆ ಬಂದಿದ್ದೇವೆ., ಈ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ.17 ಶಾಸಕರಷ್ಟೇ ಅಲ್ಲ ಬಿಜೆಪಿಯ ಎಲ್ಲ ಶಾಸಕರು ಒಗ್ಗಟ್ಟಾಗಿದ್ದೇವೆ ಅಂತಲೂ ರಮೇಶ ಜಾರಕಿಹೊಳಿ ಹೇಳಿದರು.