Breaking News

ಬೈಕ್‌ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು

Spread the love

ರಾಮನಗರ: ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಯುವಕನ ಮೇಲೆ ಮರ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ  ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ.

ಪ್ರಶಾಂತ್ (19) ಮೃತ ದುರ್ದೈವಿ. ರಾಮನಗರ ತಾಲೂಕಿನ ನಾಗೋಹಳ್ಳಿ ಗ್ರಾಮದ ಯುವಕ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ. ಈ ವೇಳೆ ರಾತ್ರಿ ಸುರಿದ ಮಳೆಗೆ ಬುಡ ಸಮೇತ ಬೃಹತ್ ಮರ ಬೈಕ್ ಮೇಲೆ ಏಕಾಏಕಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಘಟನಾ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಯುವಕನ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಲಾಗಿದೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹಾಸನದಲ್ಲಿ ರೌಡಿಶೀಟರ್‌ನ ಬರ್ಬರ ಹತ್ಯೆ – ದುಷ್ಕರ್ಮಿಗಳು ಎಸ್ಕೇಪ್‌

Spread the loveಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನದಲ್ಲಿ  ನಡೆದಿದೆ. ಹಾಸನ ನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ