Breaking News

ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ – ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ, ನಾಲ್ವರು ಪೇದೆ ಅಮಾನತು

Spread the love

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ನಡೆದಿದ್ದ ಯುವತಿ ಅತ್ಯಾಚಾರ & ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜೊತೆಗೆ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ನಾಲ್ಕು ಜನ ಪೇದೆಗಳನ್ನು ಅಮಾನತು ಮಾಡಿದ್ದಾರೆ.

ಹೊಕ್ರಾಣಿ ಗ್ರಾಮದ ಅಶ್ವಿನಿ (21) ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು. ಇದೀಗ ನಾಲ್ಕು ಜನ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಮುಖ ಆರೋಪಿ ಗುಂಡ್ಯಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಉಳಿದ ಮೂವರು ಆರೋಪಿಗಳ ವಿಚಾರಣೆ ಮುಂದುವರಿದಿದೆ. 

ನಾಲ್ವರು ಪೇದೆಗಳ ಅಮಾನತು:
ರಾತ್ರಿ ವೇಳೆ ಬಹಿರ್ದೆಸೆಗೆ ತೆರಳಿದ್ದ ಯುವತಿ ಮನೆಗೆ ವಾಪಸ್ ಬಂದಿರಲಿಲ್ಲ. ಸಿರವಾರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರೂ ಪೊಲೀಸರು ಸ್ಪಂದಿಸದೇ ನಿರ್ಲಕ್ಷ್ಯವಹಿಸಿದ್ದರು. ಮರುದಿನ ಬೆಳಿಗ್ಗೆ ಬಾವಿಯಲ್ಲಿ ಯುವತಿ ಶವ ಪತ್ತೆಯಾಗಿತ್ತು. ಅಲ್ಲದೇ ಪೊಲೀಸರ ನಿರ್ಲಕ್ಷ್ಯ ಬಗ್ಗೆ ಗ್ರಾಮಸ್ಥರು ಹೋರಾಟ ಮಾಡಿದ್ದರು. ಹಿನ್ನೆಲೆ ಕರ್ತವ್ಯ ಲೋಪ ಆರೋಪದಲ್ಲಿ 4 ಜನ ಪೊಲೀಸ್ ಪೇದೆಗಳಾದ ಭೀಮರಡ್ಡಿ, ವೀರೇಶ, ದೇವರಾಜ, ನಾಗರಾಜ ಎಂಬುವವರನ್ನು ಅಮಾನತು ಮಾಡಲಾಗಿದೆ.

ಈ ಸಂಬಂಧ ರಾಯಚೂರು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ