Breaking News

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ – ಚಿಂದಿ ಆಯುವವನ ವಿರುದ್ಧ ಪ್ರಕರಣ ದಾಖಲು

Spread the love

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿಂದಿ ಆಯುವವನ ಮೇಲೆ ವೈಟ್‌ಫೀಲ್ಡ್  ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

‎ಜೂನ್ 2ರಂದು ಪಟ್ಟಂದೂರು ಅಗ್ರಹಾರದಲ್ಲಿ ಘಟನೆ ನಡೆದಿತ್ತು. ಕೋ ಲಿವಿಂಗ್ ಪಿಜಿಯಲ್ಲಿ ವಾಸವಾಗಿದ್ದ ಕಾಲೇಜು ವಿದ್ಯಾರ್ಥಿನಿ ಓದುತ್ತಿದ್ದ ವೇಳೆ ನಿದ್ದೆ ಬರುತ್ತಿದೆ ಎಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಟೀ ಕುಡಿಯಲು ಹೋಗಿದ್ದಳು. ಟೀ ಕುಡಿದು ವಾಪಸ್ಸಾಗುವ ವೇಳೆ ವಿದ್ಯಾರ್ಥಿನಿಯನ್ನ ಆರೋಪಿ ಸೈಬುಲ್ ಮಂಡಲ್ ಹಿಂಬಾಲಿಸಿದ್ದ.

;ಇದನ್ನು ಗಮನಿಸಿದ ವಿದ್ಯಾರ್ಥಿನಿ ಭಯದಿಂದ ಪಿಜಿ ಸೇರಿಕೊಳ್ಳಲು ಓಡಿ ಬಂದಿದ್ದಳು. ಆದರೆ ಪಿಜಿಯ ಗೇಟ್ ಬಳಿಯಿಂದಲೇ ವಿದ್ಯಾರ್ಥಿನಿಯ ಕುತ್ತಿಗೆ ಹಿಸುಕಿ ಆರೋಪಿ ಪ್ರಜ್ಞೆ ತಪ್ಪಿಸಿದ್ದಾನೆ. ಬಳಿಕ ಸಮೀಪದ ಶೆಡ್ ಒಂದಕ್ಕೆ ಎತ್ತೊಯ್ದು ಅತ್ಯಾಚಾರವೆಸಗಲು ಯತ್ನಿಸಿದ್ದಾನೆ.

ಯುವತಿಯನ್ನ ಕಂಡ ಸೆಕ್ಯೂರಿಟಿ ಗಾರ್ಡ್ ತಕ್ಷಣವೇ ಪೊಲೀಸರಿಗೆ ಹಾಗು ಪಿಜಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿ ಸ್ನೇಹಿತರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆಕೆಯ ಹೇಳಿಕೆ, ವೈದ್ಯರ ವರದಿ ಅಧಾರಿಸಿ ಆರೋಪಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ ಆರೋಪಿ ಸೈಬುಲ್ ಮಂಡಲ್‌ನನ್ನ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಈಜಲು ಹಳ್ಳಕ್ಕೆ ಇಳಿದ ಸಹೋದರರಿಬ್ಬರು ನೀರುಪಾಲು – ಪೋಷಕರ ಆಕ್ರಂದನ

Spread the love ‎ಬೆಳಗಾವಿ: ಈಜಲು  ಹಳ್ಳಕ್ಕೆ ಇಳಿದಿದ್ದ ಅಣ್ಣ- ತಮ್ಮ ಇಬ್ಬರೂ ನೀರುಪಾಲಾದ ಘಟನೆ ಮೂಡಲಗಿ  ತಾಲೂಕಿನ ಧರ್ಮಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ