ಮಡಿಕೇರಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ವೈದ್ಯರು, ನರ್ಸ್ ಹಾಗೂ ಪೊಲೀಸರು ಸೇರಿದಂತೆ ಸಾಕಷ್ಟು ಜನರು ಹಗಲಿರುಳು ದುಡಿಯುತ್ತಿದ್ದಾರೆ. ಇವರ ಸೇವೆಯನ್ನು ಗಮನಿಸಿದ ಕಿರಿಕ್ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಕೊರೊನಾ ವಾರಿಯರ್ಸ್ ರ ಹಸಿವು ನೀಗಿಸುತ್ತಿದ್ದಾರೆ.
ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್‌ಗೆ ನಟಿ ರಶ್ಮಿಕಾ ಮಂದಣ್ಣ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ವೈದ್ಯರು, ನರ್ಸ್, ಪೊಲೀಸ್ ಮತ್ತು ಹೋಂ ಗಾರ್ಡ್ ಸೇರಿದಂತೆ ಒಟ್ಟು 150 ಜನ ಕೊರೊನಾ ವಾರಿಯರ್ಸ್‌ಗೆ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ.
ತಮ್ಮ ಒಡೆತನದ ಸೆರೆನಿಟಿ ಹಾಲ್‍ನಲ್ಲೇ ಅಡುಗೆ ಮಾಡಿಸಿ ಕೊರೊರಾ ವಾರಿಯರ್ಸ್‌ಗೆ ಪ್ರತಿದಿನ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಕಳೆದ ಏಪ್ರಿಲ್ 7 ರಿಂದ ಇಷ್ಟು ಜನರಿಗೂ ಊಟದ ವ್ಯವಸ್ಥೆ ಮಾಡುತ್ತಿದ್ದು, ಲಾಕ್‍ಡೌನ್ ಮುಗಿಯುವರೆಗೆ ಕೊರೊನಾ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್‌ಗೆ ಊಟದ ವ್ಯವಸ್ಥೆ ಮುಂದುವರಿಯಲಿದೆ.
ಬಿಸಿಲಿನಲ್ಲಿ ನಿಂತು ಕೆಲಸ ಮಾಡುತ್ತಿದ್ದ ಪೊಲೀಸರನ್ನು ಕಂಡು ರಶ್ಮಿಕಾ ಮಂದಣ್ಣ ಅವರಿಗೆಲ್ಲರಿಗೂ ನಿರಂತರವಾಗಿ ಊಟದ ವ್ಯವಸ್ಥೆ ಮಾಡುವಂತೆ ತಮ್ಮ ತಂದೆಯ ಬಳಿ ಹೇಳಿದ್ದರು. ಹೀಗಾಗಿ ಅಂದಿನಿಂದ ಊಟದ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸೆರೆನಿಟಿ ಹಾಲ್ ಮ್ಯಾನೇಜರ್ ತಿಳಿಸಿದರು.
https://youtu.be/yjgTcLX3tDc