ಜನ ಸಂಪರ್ಕ ಸಭೆ 20-01-2020
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ರವಿ ಡಿ ಚೆನ್ನಣ್ಣನವರ್, ಐ.ಪಿ.ಎಸ್, ರವರು ಇಂದು ನಂದಗುಡಿಯಲ್ಲಿ ಜನ ಸಂಪರ್ಕ ಸಭೆ ನಡೆಸಿದರು ಸಾರ್ವಜನಿಕರು ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ಟ್ರಾಫಿಕ್ ಸಮಸ್ಯೆ ಮತ್ತು ಗಾಂಜಾ ಹಾವಳಿ ಬಗ್ಗೆ ದೂರಿದರು ಸ್ಥಳದಲ್ಲೇ ಉಪಸ್ಥಿತರಿದ್ದ ಪಿ.ಎಸ್.ಐ ಮತ್ತು ಸಿ.ಪಿ.ಐ ರವರಿಂದ ಸಮಸ್ಯೆಯ ಪರಿಹಾರದ ಬಗ್ಗೆ ಸಾರ್ವಜನಿಕರಿಗೆ ಭರವಸೆ ನೀಡಿದರು, ಹಾಗೆಯೇ ಜಿಲ್ಲೆಯ ಹೆಚ್ಚುವರಿ ಅಧೀಕ್ಷಕರಾದ ಶ್ರೀ ಸಜೀತ್ ವಿ ಜೆ, ಕೆ.ಎಸ್.ಪಿ.ಎಸ್, ರವರು ಸರ್ಜಾಪುರ, ಸೂರ್ಯನಗರ ಮತ್ತು ಅತ್ತಿಬೆಲೆಯಲ್ಲಿ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.BENGALURU CITY POLICE
