Breaking News

ಖಾದಿ ಮಂಡಳಿಗೆ ನೇಮಕ ನಿರೀಕ್ಷಿಸಿರಲಿಲ್ಲ, ಖುಷಿಯಾಗಿದೆ: ದುರ್ಯೋಧನ ಐಹೊಳೆ…?

Spread the love

ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು.

‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್‌ಫಾದರ್‌ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮೊದಲಾದವರ ಸಹಕಾರದಿಂದ ನನಗೆ ಅವಕಾಶ ಸಿಕ್ಕಿದೆ. ಮುಖ್ಯಮಂತ್ರಿಗೆ ಎಷ್ಟು ಧನ್ಯವಾದ ಅರ್ಪಿಸಿದರೂ ಸಾಲದು’ ಎಂದು ಹೇಳಿದರು.


Spread the love

About Laxminews 24x7

Check Also

ಗಣೇಶೋತ್ಸವಕ್ಕೆ ಶಿವಶಂಬು ಪಥಕದಿಂದ ನಾದನಮನ: ಅನಿಲ್ ಬೆನಕೆ ಹಾಗೂ ಗಣ್ಯರ ಸಮ್ಮುಖದಲ್ಲಿ ವಾದ್ಯಪೂಜೆ, ಶೈಕ್ಷಣಿಕ ಸನ್ಮಾನ!

Spread the love • ಚವ್ಹಾಟ್ ಗಲ್ಲಿಯಲ್ಲಿ ಅದ್ಧೂರಿ ವಾದ್ಯಪೂಜೆ • ಅನಿಲ್ ಬೆನಕೆ ಹಾಗೂ ಗಣ್ಯರು ಭಾಗಿ • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ