Breaking News

ಮಹಾರಾಷ್ಟ್ರದ ನಂಟು – ಒಂದೇ ಕುಟುಂಬದ ಐವರಿಗೆ ಕೊರೊನಾ………

Spread the love

ರಾಯಚೂರು: ಜಿಲ್ಲೆಗೆ ಮಹಾರಾಷ್ಟ್ರದ ನಂಟಿನ ಶಾಪ ಇನ್ನೂ ಮುಗಿದಿಲ್ಲ. ಇಂದು ಹೊಸ ಐದು ಕೊರೊನಾ ಪಾಸಿಟಿವ್ ಪ್ರಕರಣಗಳು ಬಂದಿವೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16ಕ್ಕೇರಿದೆ.

ಮೇ 16 ರಂದು ಮುಂಬೈನಿಂದ ಬಂದ ರಾಯಚೂರು ತಾಲೂಕಿನ ಕೊರ್ವಿಹಾಳದ ಒಂದೇ ಕುಟುಂಬದ ಐದು ಜನರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ದೇವಸುಗೂರಿನ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದ ಐವರನ್ನ ರಾಯಚೂರಿನ ಓಪೆಕ್ ಆಸ್ಪತ್ರೆ ಐಸೋಲೇಷನ್ ವಾರ್ಡಿಗೆ ದಾಖಲಿಸಲಾಗಿದೆ.

ಐವರಲ್ಲಿ ಮೂವರು ಮಕ್ಕಳಿದ್ದಾರೆ. 12 ವರ್ಷದ ಬಾಲಕ, 14 ವರ್ಷದ ಬಾಲಕ ಮತ್ತು 13 ವರ್ಷದ ಬಾಲಕಿಯಾಗಿದ್ದು, 32 ವರ್ಷದ ಮಹಿಳೆ ಮತ್ತು 33 ವರ್ಷದ ಪುರುಷ. ಇವರೆಲ್ಲರೂ ಒಂದೇ ಕುಟುಂಬದವರು. ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದ ವ್ಯಕ್ತಿಗಳ ಬಗ್ಗೆ ಜಿಲ್ಲಾಡಳಿತ ಮಾಹಿತಿ ಕಲೆ ಹಾಕುತ್ತಿದೆ.


Spread the love

About Laxminews 24x7

Check Also

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the loveರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ