ರಾಯಚೂರು: ಭಾನುವಾರ ಲಾಕ್‍ಡೌನ್ ಜಾರಿಯಲ್ಲಿದ್ದರೂ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ಇದರಿಂದ ಬೇಸತ್ತ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಈ ತಿಂಗಳ ಅಂತ್ಯದ ವರೆಗೆ ಪ್ರತಿ ಭಾನುವಾರ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ ಜನ ಮಾತ್ರ ಇದನ್ನು ಪಾಲಿಸುತ್ತಿಲ್ಲ. ಹೀಗೆ ನಗರದಲ್ಲಿ ಅನಗತ್ಯವಾಗಿ ರಸ್ತೆಗಿಳಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ರಾಜ್ಯದ ಬಹುತೇಕ ಕಡೆ ಲಾಕ್‍ಡೌನ್ ಉಲ್ಲಂಘಿಸಲಾಗುತ್ತಿದ್ದು, ಜನ ಬೇಕಾಬಿಟ್ಟಿಯಾಗಿ ಸಂಚರಿಸುತ್ತಿದ್ದಾರೆ. ರಾಯಚೂರಿನಲ್ಲಿ ಸಹ ಇಂದು ಬೈಕ್ ಸಂಚಾರ ಹೆಚ್ಚಾಗಿತ್ತು. ಹೀಗಾಗಿ ಪೊಲೀಸರು ಲಾಠೀ ಚಾರ್ಜ್ ಮಾಡಿದ್ದಾರೆ.
ಲಾಠಿ ಏಟು ಕೊಟ್ಟು ಜನರನ್ನು ವಾಪಾಸ್ ಓಡಿಸಿದ್ದು, ಸಿಪಿಐ ಫಸಿಯುದ್ದೀನ್ ಸ್ವತಃ ರಸ್ತೆಗೆ ಇಳಿದು ಅನಗತ್ಯವಾಗಿ ರಸ್ತೆಗಿಳಿದವರಿಗೆ ಲಾಠಿ ಏಟು ಕೊಟ್ಟಿದ್ದಾರೆ. ಬೇಕಾಬಿಟ್ಟಿಯಾಗಿ ಓಡಾಡಿದ್ದಲ್ಲದೆ, ಮಾಸ್ಕ್ ಹಾಕದೇ ಬೈಕ್ ಡಬಲ್, ತ್ರಿಬಲ್ ರೈಡಿಂಗ್ ಮಾಡುತ್ತಿದ್ದವರ ಬೈಕ್ ಸೀಜ್ ಮಾಡಿದ್ದಾರೆ. ಈ ಮೂಲಕ ಲಾಕ್‍ಡೌನ್ ನಿಯಮ ಪಾಲಿಸುವಂತೆ ಸೂಚಿಸಿದ್ದು, ಇಲ್ಲವಾದಲ್ಲಿ ಶಿಕ್ಷೆ ತಪ್ಪಿದ್ದಲ್ಲ ಎಂದು ಎಚ್ಚರಿಸಿದ್ದಾರೆ.
https://www.facebook.com/105350550949710/posts/167573401394091/?sfnsn=wiwspwa&extid=pQflwleirlx7egJg&d=w&vh=e