ರಾಯಚೂರು: ನಗರದ ರೈಲ್ವೇ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಯುವಕನ ಶವಪತ್ತೆಯಾಗಿದೆ. ಮೃತ ಯುವಕನನ್ನ ನಗರದ ಕುಲಸಂಬಿ ಕಾಲೋನಿ ನಿವಾಸಿ ಕುರುಮೇಶ್ ನಾಯಕ್(23) ಅಂತ ಗುರುತಿಸಲಾಗಿದೆ.
ಘಟನಾ ಸ್ಥಳದಲ್ಲಿ ಮದ್ಯದ ಪ್ಯಾಕೆಟ್, ಊಟದ ಪ್ಯಾಕೆಟ್ ಗಳು ಪತ್ತೆಯಾಗಿವೆ. ರಾತ್ರಿ ಕುಡಿದು ಗಲಾಟೆ ಮಾಡಿಕೊಂಡಿದ್ದು, ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಶಂಕೆ ವ್ಯಕ್ತವಾಗಿದೆ.

ಕೊಲೆ ಮಾಡಿ ಶವ ಸುಟ್ಟಿರುವ ಶಂಕೆ ವ್ಯಕ್ತವಾಗುತ್ತಿದ್ದು, ಬೆಂಕಿಯಿಂದ ಸುತ್ತಲಿನ ಗಿಡಗಳು ಸುಟ್ಟು ಭಸ್ಮವಾಗಿವೆ. ರೈಲ್ವೇ ನಿಲ್ದಾಣದ ರೈಲ್ವೇ ರನ್ನಿಂಗ್ ರೂಂ ಬಳಿ ರಾತ್ರಿ ವೇಳೆ ಘಟನೆ ನಡೆದಿದ್ದು, ಜನ ಓಡಾಟ ಮಾಡುವ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ರಾಯಚೂರು ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶ್ವಾನದಳ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.
Laxmi News 24×7