Breaking News

ಪಿಜಿ ಕೋರ್ಸ್‌ಗಳ ಪ್ರವೇಶ ದಿನಾಂಕ ವಿಸ್ತರಿಸಿದ ಆರ್‌ಸಿಯು

Spread the love

ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ವಿಜಯಪುರ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ಸ್ನಾತಕೋತ್ತರ ಕೋರ್ಸುಗಳ ವ್ಯಾಸಂಗಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯು.ಯು.ಸಿ.ಎಂ.ಎಸ್ ತಂತ್ರಾಂಶ (UUCMS) https://uucms.karnataka.gov.in. ಮೂಲಕ ಅರ್ಜಿಗಳನ್ನು ದಿನಾಂಕ: 01-07-2026 ರಿಂದ ದಿನಾಂಕ:   20-07-2026. ಆಹ್ವಾನಿಸಲಾಗಿತ್ತು.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಸ್ನಾತಕೋತ್ತರ ಪ್ರವೇಶಾತಿ ಅರ್ಜಿ ಸಲ್ಲಿಸುವ ದಿನಾಂಕವನ್ನು ದಿನಾಂಕ: 21-07-2026 ರಿಂದ 26-07-2026ರ ವರೆಗೆ ವಿಸ್ತರಿಸಲಾಗಿದೆ ಎಂದು ಮೂಲಕ ತಿಳಿಸಲಾಗಿದೆ ಮುಂದುವರೆದು, 2026-27 ನೇ ಸಾಲಿನ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆಯು ದಿನಾಂಕ: 01-08-2026 ರಿಂದ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಜರಗಿಸಲಾಗುವುದು. ಪ್ರಕ್ರಿಯೆಯ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ ಜಾಲತಾಣದಿಂದ (www.rcub.ac.in)  ಪಡೆಯಬಹುದಾಗಿದೆ.


Spread the love

About Laxminews 24x7

Check Also

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಆರ್‌. ಅಶೋಕ್‌

Spread the loveಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಪಕ್ಷ ನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ