Breaking News

ಸೌಜನ್ಯ ಕೇಸ್‌ ಮರು ತನಿಖೆ – ಮುಕ್ತ ಮನಸ್ಸಿನಿಂದ ಸ್ವಾಗತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ

Spread the love

ಮಂಗಳೂರು: ಕುಮಾರಿ ಸೌಜನ್ಯ ಪ್ರಕರಣವನ್ನು  ಸುಪ್ರೀಂ ಕೋರ್ಟ್‌ ಮರು ತನಿಖೆಗೆ ಒಪ್ಪಿಸಿರುವ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಮುಕ್ತ ಮನಸ್ಸಿನಿಂದ ಸ್ವಾಗತಿಸಲಾಗಿದೆ ಎಂದು ಶ್ರೀ ಕ್ಷೇತ್ರದ ದೇವಾಲಯ ಕಚೇರಿಯ ವ್ಯವಸ್ಥಾಪಕರಾದ ಕೆ. ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಳೆದ ಹಲವು ವರ್ಷಗಳಿಂದ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಶ್ರೀ ಕ್ಷೇತ್ರದ ಮೇಲೆ ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕ್ಷೇತ್ರಕ್ಕೆ ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಕುಮಾರಿ ಸೌಜನ್ಯಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ ಎಂದು ತಿಳಿಸಿರುವ ಆಡಳಿತ ಮಂಡಳಿ, ಇದೀಗ ನ್ಯಾಯಾಲಯ ಆದೇಶಿಸಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿ ಮತ್ತು ಈ ಮೂಲಕ ಇಡೀ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಎಂದು ಆಶಿಸಿದೆ.

Spread the love

About Laxminews 24x7

Check Also

ಪಶ್ಚಿಮ ಘಟ್ಟಗಳ ರಕ್ಷಣೆ – ರಾಜ್ಯ ಸರ್ಕಾರ ಸಮಿತಿ ರಚಿಸಲಿ: ಬಿ.ಕೆ.ಹರಿಪ್ರಸಾದ್

Spread the loveಬೆಂಗಳೂರು: ಪಶ್ಚಿಮಘಟ್ಟದ ಸಂಪೂರ್ಣ ಪ್ರದೇಶವನ್ನು ಒಂದೇ ನಿಯಮದಡಿ ತರುವ ಬದಲು, ದಟ್ಟ ಅರಣ್ಯ ಪ್ರದೇಶಗಳಿಗೆ ಮಾತ್ರ ಕಠಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ