Breaking News

ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್………….

Spread the love

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ನಾಳೆಯಿಂದ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಅನುಮತಿ ಸಿಗಲಿದೆ.

ಕ್ರಷರ್ ವ್ಯವಹಾರ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಸಬ್‍ರಿಜಿಸ್ಟ್ರಾರ್ ಚೇರಿಗೆ ಬರುವ ಮುನ್ನ ಕಚೇರಿಗೆ ಕರೆ ಮಾಡಿ ಅಧಿಕಾರಿಗಳಿಗೆ ಸಮಯ ಕೇಳಿ ಬರಬೇಕಾಗುತ್ತದೆ.ಕಚೇರಿಗೆ ಬರುವವವರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಕಂದಾಯ ಸಚಿವ ಅಶೋಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈಗಾಗಲೇ ಅಗತ್ಯ ಸೇವೆ ಜೊತೆ ಆರ್ಥಿಕ ಚಟುವಟಿಕೆಗಾಗಿ ಕೆಲ ನಿಯಮಗಳನ್ನು ಸಡಿಲ ಮಾಡಲಾಗಿದೆ. ಹೀಗಾಗಿ ಕೆಲ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರದಿಂದ ಅಧಿಕೃತ ಆದೇಶ ಇನ್ನೂ ಪ್ರಕಟವಾಗಿಲ್ಲ. ಇಂದು ಈ ಬಗ್ಗೆ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ