Breaking News

ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ – ನ.19 ರಂದು ನೇರ ಸಂರ್ದಶನ

Spread the love

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 19 ರಂದು ಬೆಳಿಗ್ಗೆ 10:30 ಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಪ ಪ್ರಾದೇಶಿಕ ಉದ್ಯೋಗ( ವಿನಿಮಯ ಕಚೇರಿ, ಸಿ.ಓ.ಇ. ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಇಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

10ನೇ ತರಗತಿ ಉತ್ತೀರ್ಣ, ಪಿ.ಯು.ಸಿ. ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ, 35 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿ.ಓ.ಇ. ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 7975294271 ಅನ್ನು ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮೇಕೆದಾಟು ಯೋಜನೆ ನಮ್ಮ ಹಕ್ಕು, ಹೆಚ್‌ಡಿಕೆ ನೇತೃತ್ವದಲ್ಲೇ ದೆಹಲಿಗೆ ಹೋಗೋಣ, ಅನುಮತಿ ಕೊಡಿಸಲಿ: ಡಿ.ಕೆ.ಸುರೇಶ್

Spread the loveರಾಮನಗರ: ಮೇಕೆದಾಟು ಯೋಜನೆ ಕರ್ನಾಟಕದ ಹಕ್ಕು. ಸುಪ್ರೀಂ ಕೋರ್ಟ್ ಈಗಾಗಲೇ ಸ್ಪಷ್ಟ ನಿರ್ದೇಶನ ನೀಡಿದ್ದು, ಕೇಂದ್ರ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ