Breaking News

ಜು.10ರಿಂದ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಬಿಟ್ಟಿರುವ ಅನಾಥ ವಾಹನಗಳ ತೆರವು

Spread the love

ಬೆಂಗಳೂರು: ಜು.10ರಿಂದ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಬಿಟ್ಟಿರುವ ಅನಾಥ ವಾಹನಗಳ ತೆರವು ಹಾಗೂ ಹರಾಜು ಕಾರ್ಯ ಆರಂಭಿಸಲು ಜಿಬಿಎ ಸಜ್ಜಾಗಿದೆ.

ರಸ್ತೆಗಳು, ತೆರೆದ ಪ್ರದೇಶಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಲವಾರು ದಿನಗಳಿಂದ ಅನಾಥವಾಗಿ ಬಿಡಲಾದ ವಾಹನಗಳನ್ನು 5 ನಗರ ಪಾಲಿಕೆಗಳಲ್ಲಿ ಗುರುತಿಸಿ ಸಂಚಾರಿ ಪೊಲೀಸರು ಹಾಗೂ ಜಿಬಿಎ ಜಂಟಿಯಾಗಿ ತೆರವು ಕಾರ್ಯ ನಡೆಸಲಿದೆ. 

ಮೊದಲು ಗುರುತಿಸಲಾದ ಅನಾಥ ವಾಹನಗಳಿಗೆ 7 ದಿನಗಳ ಕಾಲಾವಕಾಶ ನೀಡಿ, ಅಧಿಕೃತ ಸ್ಟಿಕ್ಕರ್ ಮಾದರಿಯ ನೋಟಿಸ್ ಅಂಟಿಸಲಾಗುವುದು. ನೋಟಿಸ್ ಅಂಟಿಸಿದ ವಾಹನಗಳ ಚಕ್ರಕ್ಕೆ ವೀಲ್ ಕ್ಲಾಂಪ್ ಅಳವಡಿಸಲಾಗುವುದು. ನೋಟಿಸ್ ನೀಡಿದ 7 ದಿನಗಳ ಒಳಗಾಗಿ ವಾಹನಗಳ ಮಾಲೀಕರು ವಾಹನಗಳನ್ನು ತೆರವುಗೊಳಿಸದಿದ್ದರೆ, ಅಂತಹ ವಾಹನಗಳನ್ನು ಎಳೆದುಕೊಂಡು ಹೋಗಿ ಜಪ್ತಿ ಮಾಡಲಾಗುವುದು. ಜಪ್ತಿ ಮಾಡಲಾದ ಎಲ್ಲಾ ವಾಹನಗಳನ್ನು ನಿಯಮಾನುಸಾರ ಬಹಿರಂಗ ಹರಾಜು ಮಾಡಲಾಗುವುದು ಎಂದು ತಿಳಿಸಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ