Breaking News

ಅಪ್ರಾಪ್ತೆಗೆ ಬ್ಲ್ಯಾಕ್‌ಮೇಲ್‌ ಮಾಡಿ ಸಾಮೂಹಿಕ ಅತ್ಯಾಚಾರ ಆರೋಪ – ಐವರ ಬಂಧನ

Spread the love

ಚಿಕ್ಕಮಗಳೂರು: ಅಪ್ರಾಪ್ತೆಗೆ ಬ್ಲ್ಯಾಕ್‌ಮೇಲ್‌ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಗೋಣಿಬೀಡು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ನ್ಯಾಯಾಲಯಕ್ಕೆ  ಶರಣಾಗಿದ್ದಾನೆ. ಈತ ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ  ಜೈಲು ಸೇರಿದ್ದ ಎಂದು ತಿಳಿದುಬಂದಿದೆ.

ಫೋಟೋ ಒಂದನ್ನು ತೋರಿಸಿ ಅಪ್ರಾಪ್ತೆಗೆ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ 5 ಮಂದಿ ವಿರುದ್ಧ ಗೋಣಿಬೀಡು ಠಾಣೆಗೆ ಆಕೆ ದೂರು ನೀಡಿದ್ದಳು. ಇನ್ನೂ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಳು.

ಸ್ಥಳಕ್ಕೆ ಎಸ್ಪಿ ಜಿತೇಂದ್ರ ಕುಮಾರ್ ದಯಾಮ್ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸಿಪಿಐ ರಾಜಶೇಖರ್, ಪಿಎಸ್‌ಐ ಶ್ರೀನಾಥ್ ರೆಡ್ಡಿಯವರಿಂದ ಪ್ರಕರಣದ ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ